main logo

ಜೂನ್‌ 27ರಿಂದ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ: ಹೆಬ್ಬಾಳ್ಕರ್‌

ಜೂನ್‌ 27ರಿಂದ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ: ಹೆಬ್ಬಾಳ್ಕರ್‌

ಮೈಸೂರು: ಜೂನ್ 27ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದಾರೆ.

ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಬಂದು ಚಾಮುಂಡೇಶ್ವರಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು, ‘ರಾಜ್ಯದಲ್ಲಿ ಒಳ್ಳೆ ಮಳೆಯಾಗಲಿ ಎಂದು ಈಗ ದೇವಿಯನ್ನ ಬೇಡಿದ್ದೇನೆ. ಕಾಂಗ್ರೆಸ್ ಪಕ್ಷ‌ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿ ಅಂತ ಚಾಮುಂಡಿ ತಾಯಿಯಲ್ಲಿ ಹರಕೆ ಕಟ್ಟಿದ್ದೆ. ದೇವಿ ಮುಂದೆ ಸೆರೆಗೊಡ್ಡಿ ಬೇಡಿ ಕೊಂಡಿದ್ದೆ. ಇದೀಗ ಅಧಿಕಾರಕ್ಕೆ ಬಂದಿದ್ದೇವೆ. ಹೀಗಾಗಿ ಬೆಟ್ಟಕ್ಕೆ ಬಂದು ಹರಕೆ ತೀರಿಸಿದ್ದೇನೆ ಎಂದು ಹೇಳಿದರು.

ಗೃಹಲಕ್ಷ್ಮೀ ಯೋಜನೆ ಜಾರಿ ತಡವಾಗುತ್ತಿಲ್ಲ. ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಆ್ಯಪ್​ ತಯಾರಾಗಿದೆ. ಗೃಹ ಲಕ್ಷ್ಮೀ ಯೋಜನೆ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚಿಸುತ್ತೇವೆ. ಜೂ.27ರಿಂದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗುತ್ತದೆ. ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಲು ಹಣ ಪಾವತಿಸಬಾರದು. ಆಗಸ್ಟ್​ 16 ಅಥವಾ 17ರಂದು ಮನೆ ಯಜಮಾನಿ ಖಾತೆಗೆ ಹಣ ತಲುಪುತ್ತದೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *

error: Content is protected !!