Site icon newsroomkannada.com

ಉಚಿತ ಪ್ರಯಾಣ ಅರ್ಜಿ ಸಲ್ಲಿಕೆಯಲ್ಲಿ ಮಹತ್ವದ ಬದಲಾವಣೆ: ಸಚಿವರು ಹೇಳಿದ್ದೇನು

ಬೆಂಗಳೂರು: ಸರ್ಕಾರಿ ಬಸ್​​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆಂದೇ ಹೊಸದೊಂದು ಪೋರ್ಟಲ್ ಕಾರ್ಯಾರಂಭ ಮಾಡಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ ಹೇಳಿದ್ದಾರೆ.

‘ಶಕ್ತಿ ಸ್ಮಾರ್ಟ್ ಕಾರ್ಡ್‌’ಗಳಿಗೆ ಅರ್ಜಿ ಸಲ್ಲಿಸುವ ಪೋರ್ಟಲ್ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಸ್ಮಾರ್ಟ್ ಕಾರ್ಡ್‌ಗಳನ್ನು ಪಡೆಯಬಹುದು ಎಂದು ರೆಡ್ಡಿ ತಿಳಿಸಿದ್ದಾರೆ.

ಹೊಸ ಪೋರ್ಟಲ್ ಶೀಘ್ರದಲ್ಲೇ ಆರಂಭವಾಗಲಿದೆ. ಯಾವುದೇ ಗುರುತಿನ ಚೀಟಿಯನ್ನು ಅಪ್‌ಲೋಡ್ ಮಾಡುವ ಮೂಲಕ ಸ್ಮಾರ್ಟ್ ಕಾರ್ಡ್ ಪಡೆಯಬಹುದು. ಸದ್ಯಕ್ಕೆ, ಸರ್ಕಾರ ನೀಡಿದ ಯಾವುದೇ ಗುರುತಿನ ಚೀಟಿಯನ್ನು ತೋರಿಸಿ ಮಹಿಳೆಯರು ಮೂರು ತಿಂಗಳವರೆಗೆ ಉಚಿತವಾಗಿ ಪ್ರಯಾಣಿಸಬಹುದು ಎಂದು ಅವರು ಹೇಳಿದ್ದಾರೆ.

Exit mobile version