Site icon newsroomkannada.com

ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿಯನ್ನು ಕೊಲೆ ಮಾಡಿದ ಟಿಕ್‌ಟಾಕ್‌ ಸ್ಟಾರ್‌

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ ಏರೋನಿಕ್ಸ್ ಇಂಟರ್ನೆಟ್ ಕಂಪನಿ ಎಂಡಿ ಫಣಿಂದ್ರ ಸುಬ್ರಹ್ಮಣ್ಯ ಮತ್ತು ಸಿಇಒ ವಿನುಕುಮಾರ್​ ಅವರನ್ನು ಕಂಪನಿಯ ಮಾಜಿ ಉದ್ಯೋಗಿ, ಟಿಕ್ ಟಾಕ್ ಸ್ಟಾರ್ ಜೋಕರ್ ಫೆಲಿಕ್ಸ್ ಎಂಬಾತ ಕೊಲೆ ಮಾಡಿದ ಘಟನೆ ನಗರದ ಅಮೃತಹಳ್ಳಿಯಲ್ಲಿ ಇಂದು ನಡೆದಿದೆ. ​
ಏರೋನಿಕ್ಸ್ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಫೆಲಿಕ್ಸ್, ಕಂಪನಿಯಿಂದ ಹೊರಬಂದು ಸ್ವಂತ ಕಂಪನಿ ಸ್ಥಾಪಿಸಿದ್ದ. ಈ ಉದ್ಯಮಕ್ಕೆ ಪಣೀಂದ್ರ ಎದುರಾಳಿಯಾಗಿದ್ದನಂತೆ. ಇದೇ ಕಾರಣಕ್ಕೆ ಫೆಲಿಕ್ಸ್, ಎದುರಾಳಿ ಫಣೀಂದ್ರರನ್ನು ಕೊಲೆ ಮಾಡಲು ಸಂಚು ರೂಪಿಸಿದ್ದಾನೆ. ಅದರಂತೆ ಪಂಪಾ ಬಡವಾಣೆಯಲ್ಲಿರುವ ಏರೋನಿಕ್ಸ್ ಕಂಪನಿಗೆ ಇಂದು ಸಂಜೆ 4 ಗಂಟೆ ಸುಮಾರಿಗೆ ಆಗಮಿಸಿ ಪಣೀಂದ್ರ ಹಾಗೂ ವಿನುಕುಮಾರ್ ಮೇಲೆ ತಲ್ವಾರ್​ನಿಂದ ಹಲ್ಲೆ ನಡೆಸಿ ಚಾಕುವಿನಿಂದ ಚುಚ್ಚಿ ಪರಾರಿಯಾಗಿದ್ದಾನೆ.

ತಲ್ವಾರ್ ಮತ್ತು ಚಾಕುವಿನ ಇರಿತದಿಂದ ಗಂಭೀರವಾಗಿ ಗಾಯಗೊಂಡ ಫಣೀಂದ್ರ ಮತ್ತು ವಿನುಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಆಗಮಿಸಿದ ಅಮೃತಹಳ್ಳಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಫಣಿಂದ್ರ, ವಿನುಕುಮಾರ್ ಮೃತದೇಹಗಳನ್ನು ಮಣಿಪಾಲ್ ಆಸ್ಪತ್ರೆಗೆ ರವಾನಿಸಿದ್ದಾರೆ.

Exit mobile version