ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಗೀತ ರಚನಕಾರ, ನಿರ್ಮಾಪಕ ಮತ್ತು ನಿರ್ದೇಶಕ ಸಿ.ವಿ. ಶಿವಶಂಕರ್ (90) ಅವರು ಮಂಗಳವಾರ ಹೃದಯಾಘಾತದಿಂದ ನಿಧನರಾದರು. ಮೃತರ ನಿಧನಕ್ಕೆ ಸಚಿವರು ಸೇರಿದಂತೆ ನಾಡಿನ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಇಂದು ಮಂಗಳವಾರ (ಜೂನ್ 27) ಮಧ್ಯಾಹ್ನ 2 ಗಂಟೆ ಹೊತ್ತಿಗೆ ಅವರಿಗೆ ಹೃದಯಾಘಾತ ಸಂಭವಿಸಿತ್ತು. ತಕ್ಷಣಕ್ಕೆ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಅವರು ದಾರಿ ಮಧ್ಯೆಯೆ ಉಸಿರು ಚೆಲ್ಲಿದರು. ಸಿವಿ ಶಿವಶಂಕರ್ ಅವರಿಗೆ 90 ವರ್ಷ ವಯಸ್ಸಾದರೂ ಯಾವುದೇ ಗಂಭೀರ ರೂಪದ ಆರೋಗ್ಯ ಸಮಸ್ಯೆ ಅವರಿಗೆ ಕಾಡುತ್ತಿರಲಿಲ್ಲ. ಮಧ್ಯಾಹ್ನ ಊಟ ಮುಗಿಸಿ ಪೂಜೆ ಮಾಡಿದ ಬಳಿಕ ಹೃದಯಾಘಾತ ಸಂಭವಿಸಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ರತ್ನಮಂಜರಿ ಚಿತ್ರದ ಮೂಲಕ ನಟರಾಗಿ ,ಸಹಾಯಕ ನಿರ್ದೇಶಕರಾಗಿ ಚಿತ್ರರಂಗಕ್ಕೆ ಕಾಲಿಟ್ಟ ಸಿ ವಿ ಶಿವಶಂಕರ್ ಆನಂತರ ಚಲನಚಿತ್ರ ಸಾಹಿತ್ಯ ರಚನೆಯ ಮೂಲಕ ಚಿತ್ರರಂಗಕ್ಕೆ ಕೊಡುಗೆ ನೀಡಿದ್ದರು.