ಲೋಕಸಭೆ ಚುನಾವಣೆಗಾಗಿ ಭಾರತೀಯ ಜನತಾ ಪಕ್ಷ ಬುಧವಾರ ಚುನಾವಣಾ ಉಸ್ತುವಾರಿ ಮತ್ತು ಸಹ ಪ್ರಭಾರಿಗಳನ್ನು ಘೋಷಣೆ ಮಾಡಿದೆ.
ದಕ್ಷಿಣ ಕನ್ನಡ ಲೋಕಸಭಾ ಟಿಕೆಟ್ ಸಿಗದ ನಳಿನ್ ಕುಮಾರ್ ಕಟೀಲ್‌ಗೆ ಇದೀಗ ಹೈಕಮಾಂಡ್ ಮಹತ್ವದ ಜವಾಬ್ದಾರಿಯನ್ನು ನೀಡಿದೆ. ನಳಿನ್ ಕುಮಾರ್ ಕಟೀಲ್ ಅವರಿಗೆ ಕೇರಳ ಲೋಕಸಭಾ ಚುನಾವಣೆಯ ಸಹ ಉಸ್ತುವರಿಯನ್ನಾಗಿ ನೇಮಕ ಮಾಡಲಾಗಿದೆ.
ಈ ಬಾರಿ ಹೈಕಮಾಂಡ್ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಹೊಸಬರಿಗೆ ಮಣೆ ಹಾಕಿದೆ. ಅದಕ್ಕೂ ಮೊದಲೇ ನಳಿನ್ ಕುಮಾರ್ ಕಟೀಲ್ ಅವರು ಹೈಕಮಾಂಡ್ ಯಾವುದೇ ತೀರ್ಮಾನ ತಗೊಂಡರೂ ಅದಕ್ಕೆ ನಾನು ಬದ್ಧ ಎಂದು ಭಾವುಕರಾಗಿ ಹೇಳಿದ್ದರು.