Site icon newsroomkannada.com

ಪೊಯ್ಯಗುಡ್ಡೆಯಲ್ಲಿ ಎನ್‌ಐಎ ದಾಳಿ

ಮಂಗಳೂರು: ಪ್ರವೀಣ್‌ ನೆಟ್ಟಾರ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಎನ್‌ಐಎ ದಾಳಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯಗುಡ್ಡೆಯ ಕಾರು ಚಾಲಕನ ಮನೆಗೆ ಎನ್‌ಐಎ ತಂಡ ದಾಳಿ ನಡೆಸಿದ್ದು, ದಾಳಿ ವೇಳೆ ಚಾಲಕ ಮನೆಯಲ್ಲಿರಲಿಲ್ಲ, ಮನೆಯಲ್ಲಿದ್ದ ದಾಖಲೆಗಳನ್ನು ತಂಡ ವಶಕ್ಕೆ ಪಡೆದಿದೆ.

ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡ ಮತ್ತು‌ ಕೊಡಗು ಜಿಲ್ಲೆಯಲ್ಲಿ ಎನ್‌ಐಎ ತಂಡ ದಾಳಿ ಮುಂದುವರಿಸಿದೆ.

Exit mobile version