ಕರಾಚಿ: ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 52ಕ್ಕೂ ಅಧಿಕ ಜನರು ಸಾವನ್ನಪ್ಪಿದ್ದಾರೆ. ಮೃತಪಟ್ಟವರಲ್ಲಿ ಕೆಲ ಪೊಲೀಸ್ ಸಿಬ್ಬಂದಿಯೂ ಸೇರಿದ್ದಾರೆ. 130 ಕ್ಕೂ ಹೆಚ್ಚುಮಂದಿ ಗಾಯಗೊಂಡಿದ್ದಾರೆ. ಈ ಮಾಹಿತಿಯನ್ನು ಬಿಬಿಸಿ ಉರ್ದು ನೀಡಿದೆ. ಬಲೂಚಿಸ್ತಾನದ ಮಸ್ತುಂಗ್‌ನ ಅಲ್ ಫಲಾಹ್ ರಸ್ತೆಯಲ್ಲಿರುವ ಮದೀನಾ ಮಸೀದಿ ಬಳಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ ಬಿಬಿಸಿ ಉರ್ದು ವರದಿ ಮಾಡಿದೆ. ಈದ್ ಮಿಲಾದ್-ಉನ್-ನಬಿ ಸಂದರ್ಭದಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಲು ಜನರು ಅಲ್ಲಿ ಸೇರುತ್ತಿದ್ದಾಗ ಇದು ಸಂಭವಿಸಿದೆ.
ಸ್ಫೋಟದಲ್ಲಿ 52 ಜನರು ಸಾವನ್ನಪ್ಪಿದ್ದಾರೆ ಮತ್ತು 50 ಜನರು ಗಾಯಗೊಂಡಿದ್ದಾರೆ ಎಂದು ಮಸ್ತುಂಗ್ ಎಸ್‌ಎಸ್‌ಪಿ ಶೋಯೆಬ್ ಮಸೂದ್ ಹೇಳಿಕೆಯನ್ನು ಬಿಬಿಸಿ ಉರ್ದು ಉಲ್ಲೇಖಿಸಿದೆ.
ಅವರ ಪ್ರಕಾರ, ಪ್ರಸ್ತುತ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಆತ್ಮಹತ್ಯಾ ಬಾಂಬರ್‌ನಿಂದ ಸ್ಫೋಟ ನಡೆದಿರುವ ಸಾಧ್ಯತೆಯನ್ನು ಶೋಯೆಬ್ ಮಸೂದ್ ವ್ಯಕ್ತಪಡಿಸಿದ್ದಾರೆ. ಆದರೆ, ಈವರೆಗೆ ಯಾರೂ ಈ ದಾಳಿಯ ಹೊಣೆ ಹೊತ್ತುಕೊಂಡಿಲ್ಲ.