ಮೈಸೂರು: ಬಿ.ಎಸ್.ಯಡಿಯೂರಪ್ಪ ಸತತವಾಗಿ ಶ್ರಮಪಟ್ಟು ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕ ತಂದರು. ಬಿ.ಎಸ್.ಯಡಿಯೂರಪ್ಪ ಸಿಎಂ ಆದ ಕೂಡಲೇ ಪ್ರವಾಹ ಬಂದಿತ್ತು. ಬಿಎಸ್‌ವೈಒಬ್ಬರೇ ಪ್ರವಾಹ ಪರಿಸ್ಥಿತಿ ನಿಭಾಯಿಸಿದರು. ಕೊವಿಡ್ ವೇಳೆ ಜನರ ಪ್ರಾಣ ಉಳಿಸಲು ಬಿ.ಎಸ್. ವೈ ಸರ್ಕಾರ ಪ್ರಯತ್ನಿಸಿತು. ಕಷ್ಟದ ಸಂದರ್ಭದಲ್ಲಿ ಯಡಿಯೂರಪ್ಪ ರಾಜ್ಯವನ್ನು ಕಾಪಾಡಿದರು. ಬಿ.ಎಸ್. ಯಡಿಯೂರಪ್ಪ ಬಳಿಕ ಅಧಿಕಾರಕ್ಕೆ ಬಂದವರು ಮಾಡಿದ್ದೇನು? ಬಿಎಸ್ವೈರಿಂದ ಅಧಿಕಾರ ಪಡೆದ ಅತಿರಥ ಮಹಾರಥರು ಮಾಡಿದ್ದೇನು? ಕಾರ್ಯಕರ್ತರ ಇಚ್ಛೆಗೆ ತಕ್ಕಂತೆ ನಡೆದು ಕೊಂಡರಾ? ಪ್ರವೀಣ್ ನೆಟ್ಟಾರು, ಹರ್ಷ ಕೊಲೆಯಾದಾಗ ಸೂಕ್ತ ಕ್ರಮ ಕೈಗೊಳ್ಳಲಿಲ್ಲ. ಮತ್ತೆ ಅಧಿಕಾರಕ್ಕೆ ತರಬೇಕೆಂಬ ಉತ್ಸಾಹ ಅವರಲ್ಲಿ ಯಾಕೆ ಕಾಣಲಿಲ್ಲ? ಜನರ ಆಕ್ರೋಶ, ಕಾರ್ಯಕರ್ತರ ನೋವಿಗೆ ನಾನು ಧ್ವನಿಯಾಗಿದ್ದೇನೆ ಎಂದು ಮಾಜಿ ಸಿಎಂ ಬೊಮ್ಮಾಯಿ ವಿರುದ್ಧ ಪ್ರತಾಪ್ ಸಿಂಹ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರತಾಪ್ ಸಿಂಹ , ಹೊಂದಾಣಿಕೆ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ ಎಂದು ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.
ಸಂಸದ ಪ್ರತಾಪ್ ಎಳಸು ರಾಜಕಾರಣಿ ಎಂದು ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ವಿಚಾರ ಪ್ರಸ್ತಾಪಿಸಿದ ಪ್ರತಾಪ್ ಸಿಂಹ ನನ್ನನ್ನು ಎಳಸು ಎಂದರೂ ಬೇಸರವಿಲ್ಲ, ನನ್ನ ಪ್ರಶ್ನೆಗೆ ಉತ್ತರಿಸಿ ಸಾಕು. ಹಣಕಾಸು ಬಗ್ಗೆ ತಿಳಿದ ನೀವು ಹೇಗೆ ಗ್ಯಾರಂಟಿ ಘೋಷಣೆ ಮಾಡಿ ? ನನ್ನನ್ನ ಚೈಲ್ಡ್ ಅಂತಾನೆ ಕರೆಯಿರಿ ಬೇಜಾರು ಇಲ್ಲ, ಆದರೆ ರಾಜ್ಯದಲ್ಲಿ ಸಂಪನ್ಮೂಲ ಕ್ರೋಢಿಕರಣ ಮಾಡುವುದು ಹೇಗೆ ತಿಳಿಸಿ? ಎಂದು ಮೈಸೂರು ನಗರದಲ್ಲಿ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹರಿಹಾಯ್ದರು.
ಜಿ. ಪರಮೇಶ್ವರ ಅವರನ್ನು ಮುಗಿಸಿದವರು ನೀವೆ: ಸಿದ್ದುಗೆ ಟಾಂಗ್: ಸೀನಿಯರ್ ರಾಜಕಾರಣಿ ಆಗಿರುವ ನೀವು ಜಿ ಪರಮೇಶ್ವರ್‌ರನ್ನು ಮುಗಿಸಿ ಸಿಎಂ ಆದರಲ್ಲ. ಆ ರೀತಿಯ ಪ್ರಬುದ್ಧತೆ ನನಗೆ ಬೇಕಿಲ್ಲ. ರಾಜಕೀಯ ಜೀವನದಲ್ಲಿ ಮುಂದೆ ಬರಲು ಸಹಕರಿಸಿದ ಹೆಚ್ ಡಿ ದೇವೇಗೌಡರನ್ನ ಅಗೌರವವಾಗಿ ಮಾತನಾಡುವುದು ನಿಮ್ಮ ಪ್ರಬುದ್ಧತೆ ಅನ್ನುವುದಾದರೆ ಅದು ನನಗೆ ಬೇಡ. ನಿಮ್ಮ ಮಕ್ಕಳು ಮತ್ತು ಮೊಮ್ಮಕ್ಕಳ ಭವಿಷ್ಯ ರೂಪಿಸಲು ಮುಂದಾಗುವುದು ಪ್ರಬುದ್ಧತೆಯಾದರೆ ಅಂತಹ ಪ್ರಬುದ್ಧತೆ ನನಗೆ ಬೇಡ. ಅಕ್ಕಿ ಕೊಡುವ ಘೋಷಣೆ ಮಾಡುವ ಮುನ್ನ ಮೋದಿ ಜಿ ಅವರನ್ನ ಕೇಳಿದಿರಾ? ಕಾಂಗ್ರೆಸ್ ಅಧಿಕಾರಕ್ಕೆ ತರಲು ಡಿಕೆಶಿ ಪ್ರಮುಖ ಪಾತ್ರ ವಹಿಸಿದರು. ಆದರೆ ಈಗ ಡಿಕೆಶಿ ವಿರುದ್ಧ ಎಂ ಬಿ ಪಾಟೀಲ್ ರನ್ನ ಛೂ ಬಿಟ್ಟಿದ್ದೀರಿ. ಇದನ್ನೆಲ್ಲಾ ಮೆಚುರಿಟಿ ಎನ್ನುವುದಾದರೆ ಈ ರೀತಿಯ ಪ್ರಬುದ್ದತೆ ನನಗೆ ಬೇಡ. ವಿಶ್ವದ ಶ್ರೇಷ್ಠ ಅರ್ಥ ಶಾಸ್ತ್ರಜ್ಞ ಸಿದ್ದರಾಮಯ್ಯ ಅವರೇ ಗ್ಯಾರಂಟಿಗೆ ಬೇಕಾದ 59 ಸಾವಿರ ಕೋಟಿ ಹಣ ಎಲ್ಲಿಂದ ತರುತ್ತೀರಾ ಹೇಳಿ ಎಂದು ಮೈಸೂರು ಸಂಸದ ಪ್ರತಾಪ ಸಿಂಹ ಪ್ರಶ್ನಿಸಿದ