Site icon newsroomkannada.com

ರೋಶನಿ ನಿಲಯದಲ್ಲಿ ಎಂಎಸ್ಸಿ ಓದುತ್ತಿದ್ದ ವಿದ್ಯಾರ್ಥಿನಿ ನಾಪತ್ತೆ

ಮಂಗಳೂರು: ಎಂಎಸ್ಸಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆ ನಡೆಯುತ್ತಿರುವಾಗಲೇ ನಾಪತ್ತೆಯಾಗಿದ್ದು ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಾಗಿದೆ. ನಗರದ ವೆಲೆನ್ಸಿಯಾ ರೋಶನಿ ನಿಲಯದ ವಿದ್ಯಾರ್ಥಿನಿ ಎಲಿಜಬೆತ್ ದೀಪಿಕಾ ಪೊನ್ನುರಾಜ್ (21) ನಾಪತ್ತೆಯಾದವಳು.

 

ರೋಶನಿ ನಿಲಯದಲ್ಲಿ ಕ್ರಿಮಿನಾಲಜಿ ಆ್ಯಂಡ್ ಫಾರೆನ್ಸಿಕ್ ಸೈನ್ಸ್ ವಿಷಯದಲ್ಲಿ ಎಂಎಸ್ಸಿ ಮೊದಲನೇ ವರ್ಷದಲ್ಲಿ ಕಲಿಯುತ್ತಿದ್ದ ದೀಪಿಕಾ ಮೇ 7ರಂದು ಎರಡನೇ ಸೆಮಿಸ್ಟರ್ ಪರೀಕ್ಷೆ ಮುಗಿಸಿ ಹೊರಗೆ ಬಂದಿದ್ದಳು. ಆದರೆ ಕಾಲೇಜು ಕೊಠಡಿಯಿಂದ ಹೊರಬಂದಿದ್ದ ವಿದ್ಯಾರ್ಥಿನಿ ಪರೀಕ್ಷಾ ಹಾಲ್‌ಗೆ ಹಿಂತಿರುಗದೆ ನಾಪತ್ತೆಯಾಗಿದ್ದಾಳೆ.

 

ಕಾಲೇಜಿನ ಸಿಸಿಟಿವಿ ಫೂಟೇಜ್ ಪರಿಶೀಲಿಸಿದಾಗ ಕಾಲೇಜಿನಿಂದ ಹೊರಗೆ ಹೋಗಿರುವುದು ಕಂಡು ಬಂದಿದೆ. 5.6 ಅಡಿ ಎತ್ತರದ, ಗೋಧಿ ಮೈಬಣ್ಣದ, ದಪ್ಪ ಶರೀರದ ಈಕೆ ಕಾಲೇಜಿನ ಸಮವಸ್ತ್ರ ಧರಿಸಿ ಹೊರಗೆ ತೆರಳಿದ್ದಳು. ಕನ್ನಡ, ತಮಿಳು, ಹಿಂದಿ, ಇಂಗ್ಲಿಷ್ ಭಾಷೆ ಬಲ್ಲ ಈಕೆಯನ್ನು ಕಂಡವರು 0824-2220800/ 2220518/ 9480805339/ 9480805346ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Exit mobile version