ಮಂಗಳೂರು: ಕಾರು ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ ಮಂಗಳೂರಿನ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ತೀರ್ಥಹಳ್ಳಿ ಹೆದ್ದಾರಿಯ ಸಕ್ರೆಬೈಲು ಸಮೀಪ ನಡೆದಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಮಂಗಳೂರು ಕುಪ್ಪೆಪದವು ಕಲ್ಲಾಡಿ ನಿವಾಸಿ ಅಶ್ರಫ್ ಮೃತರು. ಗಾಯಾಳುಗಳು ಕೂಡ ಅದೇ ಗ್ರಾಮದವರು ಎಂದು ಹೇಳಲಾಗಿದೆ.ಕಾರು ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತ್ತಿದ್ದಾಗ ತೀರ್ಥಹಳ್ಳಿಯಿಂದ ಬಂದ ಬಸ್ ಅಪಘಾತ ನಡೆದಿದೆ
