Site icon newsroomkannada.com

PUTTTUR BREAKING : ಅರುಣ್‌ ಪುತ್ತಿಲ ಕಚೇರಿ ಎದುರು ತಲವಾರು ಪ್ರದರ್ಶನ, ಐವರು ವಶಕ್ಕೆ

ಪುತ್ತೂರು: ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲರವರು ಮುಕ್ತಂಪಾಡಿಯಲ್ಲಿ ಹೊಂದಿರುವ ಪುತ್ತಿಲ ಪರಿವಾರದ ಕಚೇರಿಯ ಮುಂಭಾಗದಲ್ಲಿ ಯುವಕನೋರ್ವ ನಾಲ್ವರು ಸಹಚರರೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿ ಬೊಬ್ಬೆ ಹೊಡೆಯುತ್ತಿದ್ದ ಘಟನೆ ನಡೆಯುತ್ತಿದ್ದಂತೆಯೇ ಪುತ್ತೂರು ನಗರ ಠಾಣಾ ಪೊಲೀಸರು ಆಗಮಿಸಿದ್ದಾರೆ. ಅರುಣ್ ಪುತ್ರಿಲ ಬೆಂಬಲಿಗರಾದ ಮನೀಶ್ ಕುಲಾಲ್ ಬನ್ನೂರು ಅವರನ್ನು ಗುರಿಯಾಗಿಟ್ಟುಕೊಂಡು ದಿನೇಶ್ ಪಂಜಿಗ ಎಂಬಾತ ನಾಲ್ವರು ಯುವಕರೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿದ್ದ. ಪುತ್ತಿಲ ಕಚೇರಿಯಲ್ಲಿ ಕೃಷ್ಣಪುಸಾದ್‌ ಶೆಟ್ಟಿ ಮತ್ತಿತರರು ಇದ್ದರು. ಮನೀಶ್ ಕುಲಾಲ್ ಕಚೇರಿಯಲ್ಲಿ ಇರಲಿಲ್ಲ. ಮಾಹಿತಿ ತಿಳಿದ ಮನೀಶ್ ಕುಲಾಲ್ ಪೊಲೀಸರಿಗೆ ಮಾಹಿತಿ ನೀಡಿದ್ದರು. ತಕ್ಷಣ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಯುವಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಾಟ್ಸಾಪ್ ಗ್ರೂಪ್‌ನಲ್ಲಿ ನಡೆದ ಚರ್ಚೆಯ ಕೋಪದಲ್ಲಿ ಈ ಕೃತ್ಯ ನಡೆದಿದೆ

Exit mobile version