ಗುವಾಹಟಿ: ಉತ್ತರ ಸಿಕ್ಕಿಂನ ಲೊನಾಕ್ ನಲ್ಲಿ ಮೇಘಸ್ಫೋಟದಿಂದ ತೀಸ್ತಾ ನದಿಯಲ್ಲಿ ಹಠಾತ್ ಪ್ರವಾಹ ಉಂಟಾದ ಪರಿಣಾಮ 14 ನಾಗರಿಕರು ಸಾವನ್ನಪ್ಪಿದ್ದಾರೆ. 22 ಸೇನಾ ಸಿಬ್ಬಂದಿ ಸೇರಿದಂತೆ 102 ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆಯನ್ನು ಸಿಕ್ಕಿಂ ಸರ್ಕಾರವು ವಿಪತ್ತು ನಿರ್ವಹಣಾ ಕಾಯ್ದೆಯಡಿ ವಿಪತ್ತು ಎಂದು ಘೋಷಿಸಿದೆ. ಸಿಂಗ್ಟಾಮ್ ಪಟ್ಟಣದ ಬಳಿಯ ಬರ್ದಂಗ್‌ನಿಂದ ನಾಪತ್ತೆಯಾಗಿದ್ದ 23 ಸೈನಿಕರಲ್ಲಿ ಒಬ್ಬರನ್ನು ರಕ್ಷಿಸಲಾಗಿದೆ ಎಂದು ಸೇನೆ ಬುಧವಾರ ಹೇಳಿದೆ. 14 ಸೇತುವೆಗಳು 3,000 ಕ್ಕೂ ಹೆಚ್ಚು ಪ್ರವಾಸಿಗರು ಸಿಕ್ಕಿಬಿದ್ದಿದ್ದಾರೆ. ಚುಂಗ್‌ಥಾಂಗ್‌ನ ತೀಸ್ತಾ ಸ್ಟೇಜ್ 3 ಅಣೆಕಟ್ಟಿನಲ್ಲಿ ಕೆಲಸ ಮಾಡುವ ಸುಮಾರು 14 ಕಾರ್ಮಿಕರು ಪ್ರವಾಹದಲ್ಲಿ ಸಿಲುಕಿಕೊಂಡಿದ್ದಾರೆ. ಮಂಗನ್ ಜಿಲ್ಲೆಯ ಚುಂಗ್ಥಾಂಗ್, ಗ್ಯಾಂಗ್ಟಾಕ್ ಜಿಲ್ಲೆಯ ಡಿಕ್ಚು ಮತ್ತು ಸಿಂಗ್ಟಮ್ ಮತ್ತು ಪಾಕ್ಯೊಂಗ್ ಜಿಲ್ಲೆಯ ರಂಗ್ಪೋದಿಂದ ಹಲವು ಮಂದಿ ಕಾಣೆಯಾಗಿದ್ದಾರೆ. ಗಾಯಗೊಂಡ 25ಕ್ಕೂ ಹೆಚ್ಚು ಜನರನ್ನು ವಿವಿಧ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.