Site icon newsroomkannada.com

ತಮಿಳುನಾಡು ವಿರುದ್ಧ ಶತಕ ಸಿಡಿಸಿದ ದೇವದತ್ ಪಡಿಕ್ಕಲ್:

ತಮಿಳುನಾಡು ವಿರುದ್ಧದ ರಣಜಿ ಟ್ರೋಫಿ ಪಂದ್ಯದಲ್ಲಿ ದೇವದತ್ ಪಡಿಕ್ಕಲ್ ಶತಕ ಸಿಡಿಸುವ ಮೂಲಕ ಮಿಂಚಿದ್ದಾರೆ. 2024ರಲ್ಲಿ ಅವರು ನಾಲ್ಕನೇ ಶತಕ ಸಿಡಿಸುವ ಮೂಲಕ ಅತ್ಯುತ್ತಮ ಫಾರ್ಮ್‌ ಮುಂದುವರೆಸಿದ್ದಾರೆ.
ತಮಿಳುನಾಡು ಮತ್ತು ಕರ್ನಾಟಕ ನಡುವಿನ ರಣಜಿ ಟ್ರೋಫಿ ಕ್ರಿಕೆಟ್ ಪಂದ್ಯದ ಮೊದಲನೇ ದಿನದಂದು ಕರ್ನಾಟಕದ ಬ್ಯಾಟರ್ ದೇವದತ್ ಪಡಿಕ್ಕಲ್ ಚೆನ್ನೈನ ಎಂ.ಎ. ಚಿದಂಬರಂ ಕ್ರೀಡಾಂಗಣದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಸುದ್ದಿಯಾಗಿದ್ದಾರೆ.

ದೇವದತ್ ಪಡಿಕ್ಕಲ್ ಅವರು ತಮ್ಮ ಶತಕ ಸಿಡಿಸಿದ ಬಳಿಕ ಸಂಭ್ರಮಾಚರಣೆ ಮಾಡಿದ ವಿಧಾನ. ಅವರು 216 ಎಸೆತಗಳಲ್ಲಿ 12 ಬೌಂಡರಿ 6 ಭರ್ಜರಿ ಸಿಕ್ಸರ್ ಸಹಿತ 151 ರನ್ ಗಳಿಸಿದರು. ಕರ್ನಾಟಕ ಮೊದಲ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 288 ರನ್ ಗಳಿಸಿದೆ.

ದೇವದತ್ ಪಡಿಕ್ಕಲ್ 2024ರಲ್ಲಿ ತಮ್ಮ ಅಮೋಘ ಬ್ಯಾಟಿಂಗ್ ಪ್ರದರ್ಶನವನ್ನು ಮುಂದುವರೆಸಿದ್ದಾರೆ. 2024ರಲ್ಲಿ ಆಡಿರುವ 8 ಇನ್ನಿಂಗ್ಸ್‌ಗಳಲ್ಲಿ 4 ಶತಕ ಬಾರಿಸುವ ಮೂಲಕ, ಬಿಸಿಸಿಐ ಆಯ್ಕೆದಾರರ ಗಮನ ಸೆಳೆದಿದ್ದಾರೆ.

ಪಂಜಾಬ್, ಗೋವಾ, ತಮಿಳುನಾಡು ವಿರುದ್ಧ ಶತಕ ಸಿಡಿಸಿದ್ದಲ್ಲದೆ, ಇಂಗ್ಲೆಂಡ್ ಲಯನ್ಸ್ ವಿರುದ್ಧದ ಪಂದ್ಯದಲ್ಲಿ ಕೂಡ ಪಡಿಕ್ಕಲ್ ಶತಕ ಸಿಡಿಸಿ ಗಮನ ಸೆಳೆದಿದ್ದಾರೆ. ಅವರು ಇದೇ ರೀತಿ ಪ್ರದರ್ಶನ ನೀಡುವ ಮೂಲಕ ಭಾರತ ತಂಡಕ್ಕೆ ಆಯ್ಕೆಯಾಗುವ ವಿಶ್ವಾಸವನ್ನು ಹೊಂದಿದ್ದಾರೆ.

Exit mobile version