ಮಂಗಳೂರು: ಆನ್‌ಲೈನ್‌ನಲ್ಲಿ 3 ಪ್ರತಿಷ್ಠಿತ ಏಜೆನ್ಸಿಗಳು ಬರೋಬ್ಬರಿ 28 ಕೋಟಿ ರೂ.ಗೆ ರಕ್ತ ಚಂದನವನ್ನು ಬಿಡ್ ಮಾಡಿದ್ದು, ಮಂಗಳೂರಿನ ಪಣಂಬೂರು ಬಂದರಿನ ಕಸಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದ ರಕ್ತ ಚಂದನವನ್ನು ಅಧಿಕಾರಿಗಳು ಹರಾಜು ಮಾಡಿದ್ದಾರೆ.
2008 ರಿಂದ 2023ರವರೆಗೆ 4 ಪ್ರಕರಣಗಳಲ್ಲಿಈ ರಕ್ತಚಂದನವನ್ನು ವಶಪಡಿಸಿಕೊಳ್ಳಲಾಗಿತ್ತು. ಸುಮಾರು 56.2 ಮೆಟ್ರಿಕ್ ಟನ್ ರಕ್ತಚಂದನವನ್ನು ಹರಾಜು ಹಾಕಲಾಗಿದ್ದು, ಮಂಗಳೂರು ಬಂದರಿನಿಂದ ಅಕ್ರಮವಾಗಿ ವಿದೇಶಕ್ಕೆ ಕಳ್ಳಸಾಗಾಟ ಮಾಡುತ್ತಿದ್ದ ರಕ್ತಚಂದನಗಳಾಗಿವೆ.
ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯ ಅರಣ್ಯ ಇಲಾಖೆ ಆನ್‌ಲೈನ್ ಮೂಲಕ ಹರಾಜು ಮಾಡುತ್ತದೆ. ಒಟ್ಟು 2,094 ದಿಮ್ಮಿಗಳನ್ನು ಒಳಗೊಂಡ 56.2 ಮೆಟ್ರಿಕ್ ಟನ್ ರಕ್ತಚಂದನ ಹರಾಜಿಗಿಡಲಾಗಿದೆ. ಎ ಕೆಟಗರಿ 3 ಲಾಟ್, ಬಿ ಕೆಟಗರಿ 6 ಲಾಟ್, ಸಿ ಕೆಟಗರಿ 6 ಲಾಟ್, ಡಿ ಕೆಟಗರಿ 3 ಲಾಟ್ ಗಳಾಗಿ ರಕ್ತಚಂದನವನ್ನು ವಿಂಗಡಣೆ ಮಾಡಲಾಗಿದೆ.
ಒಟ್ಟು 18 ಲಾಟ್‌ಗಳಲ್ಲಿ ನ್ಯಾಚುರಲ್ ಕನ್ನೊಜೆನ್ಸಿ ಏಜೆನ್ಸಿ 10 ಲಾಟ್‌ಗೆ 14.5 ಕೋಟಿ ರೂ. ಗೆ ಬಿಡ್ ಮೌಲ್ಯಗಳನ್ನು ನಿರ್ಧರಿಸಿದ್ದಾರೆ. ಯಮಾ ರಿಬನ್ಸ್ ಏಜೆನ್ಸಿ ಲಾಟ್‌ಗೆ 4.2ಕೋಟಿ ರೂ. ಬಿಡ್ ಮತ್ತು ಅಕ್ಷಾ 3 ಲಾಟ್ ಗೆ 1.6 ಕೋಟಿ ರೂ.ಗೆ ಬಿಡ್ ಮಾಡಿದೆ ಇದರ ಜೊತೆಗೆ ಒಟ್ಟು ಮೂರು ಬಿಡ್‌ಗಳ ಒಟ್ಟು ಮೊತ್ತ ತೆರಿಗೆ ಸೇರಿ 28 ಕೋಟಿ ರೂ. ಆಗಲಿದೆ ಎಂದು ಅಧಿಕಾರಿಗಳು ಅಂದಾಜು ಮಾಡಿದ್ದಾರೆ.