ಉಡುಪಿ: ಜಿಲ್ಲೆಯ ಬ್ರಹ್ಮಾವರ ತಾಲೂಕಿನಲ್ಲಿ 2022-23 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರ ಕೋಡಿ ಗ್ರಾಮ ಪಂಚಾಯಿತಿಗೆ ದೊರಕಿದ್ದು ಅ.2ರಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಐಟಿ ಮತ್ತು ಬಿಟಿ ಸಚಿವ ಪ್ರಿಯಾಂಕ ಖರ್ಗೆ ಇವರು ಗ್ರಾಮ ಪಂಚಾಯತ್ ಪರವಾಗಿ ಪಂಚಾಯತ್ ಅಧ್ಯಕ್ಷರಾದ ಪ್ರಭಾಕರ್ ಮೆಂಡನ್ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವೀಂದ್ರರಾವ್ ಅವರಿಗೆ ಬ್ಯಾಂಕ್ ವೇಟ್ ಹಾಲ್ ವಿಧಾನಸೌಧ ಇಲ್ಲಿ ಪ್ರಶಸ್ತಿ ಪ್ರಧಾನ ಮಾಡಿದರು.
ಚರಕದ ಸ್ಮರಣಿಕೆ ಪ್ರಶಸ್ತಿ ಪತ್ರ ಹಾಗೂ ಪಂಚಾಯತ್ ಕಾಮಗಾರಿಗೆ 5 ಲಕ್ಷ ರೂಪಾಯಿ ಬಹುಮಾನ ಒಳಗೊಂಡಿದೆ. ಈ ಸಂದರ್ಭದಲ್ಲಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಆಯುಕ್ತರು ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಲಯ ಹಾಗೂ ಉಮಾಮದೇವನ್ ಅಪರ ಮುಖ್ಯ ಕಾರ್ಯದರ್ಶಿಗಳು ಪಂಚಾಯತ್ ರಾಜ್ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಉದ್ಘಾಟಿಸಿ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಉಪಸ್ಥಿತರಿದ್ದರು.