ಮೂಲ್ಕಿ: ಇಲ್ಲಿ ಹೆದ್ದಾರಿ ಪಕ್ಕದಲ್ಲಿರುವ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಯುವಕ ಮೃತಪಟ್ಟಿದ್ದಾನೆ. ಝಾರ್ಖಂಡ್ ಮೂಲದ ಬಬ್ಲಿ ಬಸೇರಾ (27) ಮೃತ ಯುವಕ. ಮೇಸ್ತ್ರಿ ಸಹಾಯಕರಾಗಿ ಕೆಲಸ ಮಾಡುತ್ತಿದ್ದ ಅವರು ರಾತ್ರಿ 11 ಗಂಟೆ ಸುಮಾರಿಗೆ ಕಟ್ಟಡದಲ್ಲಿ ವಯರ್ ಅನ್ನು ಸುತ್ತಿ ಬದಿಗಿರಿಸಲು ಹೋದಾಗ ವಿದ್ಯುತ್ ಪ್ರವಹಿಸಿ ಸಾವು ಸಂಭವಿಸಿದೆ.