main logo

ಮಂಗಳಾದೇವಿ: ಅಂಗಡಿಗಳಲ್ಲಿ ಕೇಸರಿ ಧ್ವಜ ಕಟ್ಟಿದ ಪಂಪ್‌ ವೆಲ್‌ ವಿರುದ್ಧ ದೂರು

ಮಂಗಳಾದೇವಿ: ಅಂಗಡಿಗಳಲ್ಲಿ ಕೇಸರಿ ಧ್ವಜ ಕಟ್ಟಿದ ಪಂಪ್‌ ವೆಲ್‌ ವಿರುದ್ಧ ದೂರು

ಮಂಗಳೂರು: ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಚಟುವಟಿಕೆಯಲ್ಲಿ ತೊಡಗಿರುವ ಆರೋಪದ ಮೇಲೆ ಮಂಗಳೂರು ನಗರ ಪೊಲೀಸರು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಮತ್ತು ಇತರರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

16ರಂದು ಶ್ರೀ ಮಂಗಳಾದೇವಿ ದೇವಸ್ಥಾನದ ಸುತ್ತಮುತ್ತಲಿನ ಹಿಂದೂಗಳು ನಡೆಸುತ್ತಿದ್ದ ಅಂಗಡಿಗಳ ಮೇಲೆ ಶರಣ್ ಪಂಪ್‌ವೆಲ್ ಅವರು ಇತರ ಕಾರ್ಯಕರ್ತರೊಂದಿಗೆ ಕೇಸರಿ ಧ್ವಜಗಳನ್ನು ಕಟ್ಟಿದ್ದರು. ಈ ಕ್ರಮಗಳು ಮತ್ತು ಹೇಳಿಕೆಗಳು ಧಾರ್ಮಿಕ ವೈಷಮ್ಯವನ್ನು ಕೆರಳಿಸುವ ಸಾಮರ್ಥ್ಯವನ್ನು ಹೊಂದಿವೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಬುಧವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪಿಎಸ್‌ಐ ಮನೋಹರ್ ಪ್ರಸಾದ್ ನೀಡಿದ ದೂರಿನ ಆಧಾರದ ಮೇಲೆ ಶರಣ್ ಪಂಪ್‌ವೆಲ್ ಹಾಗೂ ಇತರರ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

error: Content is protected !!