ಉತ್ತರ ಪ್ರದೇಶ: ಬಂದಾ ಜಿಲ್ಲೆಯಲ್ಲಿ ಅಚ್ಚರಿಯ ಘಟನೆಯೊಂದು ಬೆಳಕಿಗೆ ಬಂದಿದೆ . ವೃದ್ಧನೊಬ್ಬ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದಾನೆ. ಇದಕ್ಕೆ ಕಾರಣ ತಿಳಿದರೆ ನೀವೂ ಖಂಡಿತಾ ಆಶ್ಚರ್ಯ ಪಡುತ್ತೀರಿ. ತನ್ನ ಸೊಸೆ ಸಂಜೆ ಚಹಾ ಕೇಳಿದ ತಕ್ಷಣ ಕೊಟ್ಟಿಲ್ಲ ಎಂದು ಮಾವ ಕೋಪಗೊಂಡು ತನ್ನ ಮೇಲೆ ತಾನೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾನೆ. ವೃದ್ಧನನ್ನು ಅಕ್ಕಪಕ್ಕದ ಮನೆಯವರು ಆಸ್ಪತ್ರೆಗೆ ದಾಖಲಿಸಿದ್ದರೂ ಕೂಡ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದು ತಿಳಿದುಬಂದಿದೆ.
ಬಂದಾ ಜಿಲ್ಲೆಯ ಕಮಾಸಿನ್ ಪೊಲೀಸ್ ಠಾಣೆ ವ್ಯಾಪ್ತಿಯ ಆದೌರಾ ಗ್ರಾಮದಲ್ಲಿ ನಡೆದಿದೆ. ಅವಧ್ ಕಿಶೋರ್ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದು, ಕಿರುಚಾಟ ಕೇಳುತ್ತಿದ್ದಂತೆ ಅಕ್ಕಪಕ್ಕದ ಮನೆಯವರು ತಕ್ಷಣ ಸ್ಪಂದಿಸಿ ಬಾಗಿಲು ತೆರೆದು ಒಳಗೆ ಹೋಗಿ ಬೆಂಕಿ ನಂದಿಸಿ ವೃದ್ಧನನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆ ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ವೃದ್ಧ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು. ಪೊಲೀಸರು ಸ್ಥಳಕ್ಕಾಗಮಿಸಿ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ವೃದ್ಧೆಯೊಬ್ಬರ ಆತ್ಮಹತ್ಯೆಯಿಂದ ಕುಟುಂಬದಲ್ಲಿ ಗೊಂದಲ ಉಂಟಾಗಿದ್ದು, ಹಳ್ಳಿಯಲ್ಲೂ ನೀರವ ಮೌನ ಆವರಿಸಿದೆ.