ಬೆಂಗಳೂರು: ಕೆಲ ದಿನಗಳಿಂದ ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರಖ್ಯಾತ ಹಿರಿಯ ನಟಿ ಲೀಲಾವತಿ ಅವರು ಶುಕ್ರವಾರ ಸಂಜೆ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು.
ದಕ್ಷಿಣ ಕನ್ನಡ ದ ಬೆಳ್ತಂಗಡಿ ಮೂಲದ ಲೀಲಾವತಿ ( ಲೀಲಾ ಕಿರಣ್) ಕನ್ನಡ, ತಮಿಳು ಮತ್ತು ತೆಲುಗು ಚಲನಚಿತ್ರಗಳಲ್ಲಿ ನಟಿಸಿದ್ದ ಹಿರಿಯ ಭಾರತೀಯ ನಟಿ. 50 ವರ್ಷಗಳಿಗೂ ಹೆಚ್ಚು ಕಾಲ ತಮ್ಮ ವೃತ್ತಿಜೀವನದುದ್ದಕ್ಕೂ 600 ಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ನಟಿಸಿದ್ದರು. ಕನ್ನಡದಲ್ಲಿ 400 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿ ಮನೆ ಮಾತಾಗಿದ್ದರು. ಭಕ್ತ ಕುಂಬಾರ, ಮನ ಮೆಚ್ಚಿದ ಮಡದಿ ಮತ್ತು ಸಂತ ತುಕಾರಂ ಚಿತ್ರಗಳಲ್ಲಿನ ಸ್ಮರಣೀಯ ಅಭಿನಯಕ್ಕಾಗಿ ಅವರು ಜನಪ್ರಿಯತೆಯ ಉತ್ತುಂಗಕ್ಕೆ ಏರಿದ್ದರು. ವರು 1999 ರಲ್ಲಿ ಡಾ. ರಾಜ್‌ಕುಮಾರ್ ಪ್ರಶಸ್ತಿ ಮತ್ತು ಫಿಲ್ಮ್‌ಫೇರ್ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.