ಮಡಿಕೇರಿ: ಇತ್ತೀಚೆಗೆ ಹೃದಯಾಘಾತದಿಂದ ಮೃತಪಡುವ ಜನರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಅಂತಹುದೇ ಒಂದು ದುರ್ಘಟನೆ ಮಡಿಕೇರಿಯಲ್ಲಿ ನಡೆದಿದೆ. ಚಾರಣಕ್ಕೆ ತೆರಳಿದ್ದ ಯುವಕನೋರ್ವ ಹೃದಯಾಘಾತದಿಂದ ನಿಧನ ಹೊಂದಿದ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಜತಿನ್ ಕುಮಾರ್ (25) ಎಂದು ಗುರುತಿಸಲಾಗಿದ್ದು, ಈತ ಹರಿಯಾಣ ಮೂಲದ ನಿವಾಸಿಯಾಗಿದ್ದಾನೆ. ಕೊಡಗು ಜಿಲ್ಲೆಯ ಮಡಿಕೇರಿ ತಾ. ತಡಿಯಂಡಮೋಳು ಬೆಟ್ಟ ವೀಕ್ಷಣೆ ವೇಳೆ ಈ ಅವಘಡ ಸಂಭವಿಸಿದೆ
ಬೆಂಗಳೂರಿನ ಖಾಸಗಿ ಕಂಪನಿ ಒಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜತಿನ್ ಕುಮಾರ್, ತನ್ನ ಸ್ನೇಹಿತರೊಂದಿಗೆ ಮಡಿಕೇರಿಗೆ ಆಗಮಿಸಿದ್ದನು. ಅಂತೆಯೇ ಭಾನುವಾರ ಬೆಟ್ಟದ ಮೇಲೆ ತಲುಪಿದಾಗ ಎದೆನೋವು ಕಾಣಿಸಿಕೊಂಡಿದೆ. ಕೆಲಹೊತ್ತಿನಲ್ಲೇ ಎದೆ ನೋವು ಜಾಸ್ತಿ ಆಗಿ ಜತಿನ್ ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟಿದ್ದಾನೆ
