main logo

ಅಯೋಧ್ಯೆ ರಾಮ ಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ ಕರುನಾಡಿನ ರಾಮ ಮೂರ್ತಿ!

ಅಯೋಧ್ಯೆ ರಾಮ ಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ ಕರುನಾಡಿನ ರಾಮ ಮೂರ್ತಿ!

ಮೈಸೂರು: ಇದೇ ಜನವರಿ 22ರಂದು ಅಯೋಧ್ಯೆಯ ಭವ್ಯ ಶ್ರೀರಾಮಮಂದಿರದಲ್ಲಿ ರಾಮ ಲಲ್ಲಾ ಮೂರ್ತಿಯ ಪ್ರತಿಷ್ಠಾಪನೆ ನಡೆಯಲಿದೆ. ಈ ಐತಿಹಾಸಿಕ ಕ್ಷಣಕ್ಕೆ ಕೋಟ್ಯಾನುಕೋಟಿ ರಾಮನ ಭಕ್ತರು ಕಾಯುತ್ತಿದ್ದಾರೆ. ರಾಮ ಲಲ್ಲಾ ಮೂರ್ತಿಯ ಪ್ರತಿಷ್ಠಾಪನೆಗೆ ದಿನಗಣನೆ ಶುರುವಾಗಿರುವಾಗ ಕನ್ನಡಿಗರಿಗೆ ಸಿಹಿ ಸುದ್ದಿ ಸಿಕ್ಕಿದೆ.

ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆ ಮಾಡಲಾಗುವ ರಾಮ ಲಲ್ಲಾ ಮೂರ್ತಿಗೆ ಮೂವರು ಶಿಲ್ಪಿಗಳನ್ನ ನೇಮಿಸಲಾಗಿತ್ತು. ಈ ಮೂರರಲ್ಲಿ ಮೈಸೂರು ಶಿಲ್ಪಿ‌ ಅರುಣ್ ಯೋಗಿರಾಜ್ ಅವರ ಮೂರ್ತಿಯೇ ಅಂತಿಮವಾಗಿದೆ ಎನ್ನಲಾಗಿದೆ.

ಮೈಸೂರಿನ ಅರುಣ್​ ಅವರೊಂದಿಗೆ ಬೆಂಗಳೂರಿನ ಜಿ,ಎಲ್,ಭಟ್ ಹಾಗೂ ರಾಜಸ್ಥಾನದ ಸತ್ಯನಾರಾಯಣ ಪಾಂಡೇ ಕೂಡ ಈ ರಾಮ ಲಲ್ಲ ಮೂರ್ತಿ ಕೆತ್ತನೆ ಮಾಡಿದ್ದಾರೆ. ಇನ್ನು 51 ಇಂಚು ಎತ್ತರದ ಮೂರ್ತಿ ಇದಾಗಿದ್ದು, ಒಟ್ಟು ಮೂರ್ತಿಯ ಗ್ರಾತ್ರ 8 ಅಡಿ ಎತ್ತರ ಹಾಗೂ ಮೂರು ಅಡಿ ಅಗಲ ಇದೆ. ಇದರಲ್ಲಿ ಪ್ರಭಾವಳಿಯೂ ಒಳಗೊಂಡಿದೆ. ಈ ಮೂರ್ತಿಯನ್ನು ಪ್ರಧಾನಿ ನರೇಂದ್ರ ಮೋದಿಯವರು ಅನಾವರಣಗೊಳಿಸಲಿದ್ದಾರೆ.

ಜನವರಿ 22ರಂದು ಆಯೋಧ್ಯೆ ರಾಮ ಮಂದರದಲ್ಲಿ ಆಯೋಜನೆಗೊಂಡಿರುವ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ 2 ಸಾವಿರ ಆಹ್ವಾನಿತರಲ್ಲಿ ಅರುಣ್​ ಸಹ ಒಬ್ಬರು. ಎಂಬಿಎ ಪದವೀಧರರಾಗಿರುವ ಅರುಣ್ ಕಾರ್ಪೋರೇಟ್ ನೌಕರಿಯನ್ನು ತೊರೆದು ಕುಟುಂಬ ನಡೆಸಿಕೊಂಡು ಬಂದ ಶಿಲ್ಪ ಕೆತ್ತನೆ ವೃತ್ತಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. 2008ರಿಂದ ಈವರೆಗೂ ಸುಮಾರು 1 ಸಾವಿರಕ್ಕೂ ಹೆಚ್ಚು ವಿವಿಧ ಪ್ರತಿಮೆಗಳನ್ನು ಕತ್ತನೆ ಮಾಡಿದ್ದಾರೆ. ಈ ಮೊದಲು ಕೇದರನಾಥ ದೇಗುಲ್ಕೆ ಆದಿ ಶಂಕರಾಚಾರ್ಯರ ಮೂರ್ತಿಯನ್ನು ಅರುಣ್ ಕೆತ್ತಿದ್ದರು. ದೆಹಲಿಯ ಇಂಡಿಯಾ ಗೇಟ್ ಬಳಿ ಸ್ಥಾಪಿಸಲಾದ ಸುಭಾಶಚಂದ್ರ ಬೋಸ್ ಅವರ ಪ್ರತಿಮೆಯನ್ನು ಸಹ ಅರುಣ್ ಕೆತ್ತಿದ್ದರು.

Related Articles

Leave a Reply

Your email address will not be published. Required fields are marked *

error: Content is protected !!