main logo

ರಾಮಮಂದಿರದ ಗರ್ಭಗುಡಿಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ

ರಾಮಮಂದಿರದ ಗರ್ಭಗುಡಿಯಲ್ಲಿ ಬಾಲರಾಮನ ಪ್ರಾಣಪ್ರತಿಷ್ಠಾಪನೆ

ಅಯೋಧ್ಯೆ: ಬರೋಬ್ಬರಿ 500 ವರ್ಷಗಳ ಕಾಯುವಿಕೆಗೆ ಇದೀಗ ಅಂತ್ಯ ಬಿದ್ದಿದೆ. ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಾಗಿದೆ. ಈ ಮೂಲಕ 500 ವರ್ಷಗಳ ಬಳಿಕ ಬಾಲರಾಮ ತನ್ನ ಸ್ವಸ್ಥಾನಕ್ಕೆ ಮರಳಿದ್ದಾರೆ.
12 ಗಂಟೆ 30 ನಿಮಿಷ 32 ಸೆಕೆಂಡ್‌ಗಳ ಮಧ್ಯೆ ಅಭಿಜಿತ್‌ ಮುಹೂರ್ತದಲ್ಲಿ (ʼಅಭಿಜಿತ್‌ʼ ಅಂದ್ರೆ ʼಜಯಶಾಲಿʼ ಎಂದರ್ಥ) ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ನೆರವೇರಿದೆ. ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆದಿದೆ. ಇದಕ್ಕೂ ಮುನ್ನ ಪ್ರಧಾನಿಯವರ ಸಾರಥ್ಯದಲ್ಲಿ ಮೂಲ ವಿಗ್ರಹದ ಎದುರು ವಿಧಿ-ವಿಧಾನಗಳನ್ನು ನೆರವೇರಿತು. ಗರ್ಭಗುಡಿಯಲ್ಲಿ ಪೂಜಾ-ಕೈಂಕರ್ಯಗಳು ನಡೆದವು. ಬಳಿಕ ಬಾಲರಾಮನ ಹಣೆಗೆ ಮೋದಿ ತಿಲಕವಿಟ್ಟರು. ಈ ಸಂದರ್ಭದಲ್ಲಿ ಶಂಖ, ಜಾಗಟೆಗಳು ಮೊಳಗಿದವು

ಪ್ರಾಣ ಪ್ರತಿಷ್ಠೆ ಸಂದರ್ಭದಲ್ಲಿ ಗರ್ಭಗುಡಿಯಲ್ಲಿ ಯುಪಿ ಸಿಎಂ ಯೋಗಿ ಆದಿತ್ಯನಾಥ್‌, ಆರ್‌ಎಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ರಾಜ್ಯಪಾಲೆ ಆನಂದಿ ಬೆನ್‌ ಪಟೇಲ್‌ ಹಾಗೂ ಅಯೋಧ್ಯೆಯ ಪ್ರಧಾನ ಅರ್ಚಕರು ಉಪಸ್ಥಿತರಿದ್ರು.

Related Articles

Leave a Reply

Your email address will not be published. Required fields are marked *

error: Content is protected !!