main logo

ಅಯೋಧ್ಯೆ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ವೇಳೆ ಪೇಜಾವರ ಶ್ರೀ ಮುಖ ಮುಚ್ಚಿಕೊಂಡಿದ್ದೇಕೆ?

ಅಯೋಧ್ಯೆ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ವೇಳೆ ಪೇಜಾವರ ಶ್ರೀ ಮುಖ ಮುಚ್ಚಿಕೊಂಡಿದ್ದೇಕೆ?

ಅಯೋಧ್ಯೆ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮವನ್ನು ದೇಶ ವಿದೇಶದ ಕೋಟ್ಯಂತರ ಮಂದಿ ಕಣ್ತುಂಬಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಉಡುಪಿ ಪೇಜಾವರ ಮಠದ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಗರ್ಭಗುಡಿಯಲ್ಲಿ ಮುಖ ಮುಚ್ಚಿಕೊಂಡಿದ್ದರು. ಅದೇಕೆ ಗೊತ್ತಾ? ರಾಮಲಲ್ಲಾನಿಗೆ ನೈವೇದ್ಯ ಮಾಡುವ ಸಂದರ್ಭದಲ್ಲಿ ದೇವರನ್ನು ನೋಡಬಾರದು ಎಂಬ ಶಾಸ್ತ್ರೀಯ ನಿಯಮ ಇದೆ. ಪ್ರಧಾನಿ ಮೋದಿಯವರು ರಾಮಲಲ್ಲಾನಿಗೆ ಭಕ್ಷ್ಯ ಮತ್ತು ಫ‌ಲಗಳನ್ನು ನೈವೇದ್ಯ ಮಾಡುತ್ತಿದ್ದರು.

ಈ ವೇಳೆ ಮೋದಿ ಸಮೀಪವೇ ಇದ್ದ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಮ್ಮ ಅಂಗವಸ್ತ್ರದಿಂದ ಮುಖ ಮುಚ್ಚಿಕೊಂಡರು. ಜತೆಗೆ ವಿಧಿವಿಧಾನಗಳು ನಡೆಯುತ್ತಿದ್ದ ವೇಳೆ ಅವರು, ಮಂತ್ರೋಚ್ಛಾರಣೆ ಮಾಡುತ್ತಿದ್ದರು. ಜತೆಗೆ, ಕೆಲ ಸಂದರ್ಭದಲ್ಲಿ ಪ್ರಧಾನಿಗೆ ಸಲಹೆ ಸೂಚನೆಗಳನ್ನು ನೀಡುತ್ತಿದ್ದದ್ದೂ ಕಂಡುಬಂತು.

Related Articles

Leave a Reply

Your email address will not be published. Required fields are marked *

error: Content is protected !!