main logo

ಇಂದು ರಾಜ್ಯ ಬಜೆಟ್‌, ಜನರಿಗೆ ಸಿಹಿ ನೀಡ್ತಾರಾ ಸಿಎಂ

ಇಂದು ರಾಜ್ಯ ಬಜೆಟ್‌, ಜನರಿಗೆ ಸಿಹಿ ನೀಡ್ತಾರಾ ಸಿಎಂ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು(ಫೆಬ್ರವರಿ 16) ಬೆಳಗ್ಗೆ 10:15ಕ್ಕೆ 2024-25ನೇ ಸಾಲಿನ ಬಜೆಟ್ (Karnataka Budget 2024) ಮಂಡನೆ ಮಾಡಲಿದ್ದಾರೆ. ಬಜೆಟ್ ಮಂಡನಗೂ ಮುನ್ನ ಸಿದ್ದರಾಮಯ್ಯ ಅವರು ವಿಶೇಷ ಸಂಪುಟ ಸಭೆ(Cabinet Meeting) ನಡೆಸಲಿದ್ದಾರೆ. ಸಿದ್ದರಾಮಯ್ಯ ಮಂಡಿಸುತ್ತಿರುವ 15ನೇ ಬಜೆಟ್ ಇದಾಗಿದ್ದು,. ಕರ್ನಾಟಕದ ಮಟ್ಟಿಗೆ ಇದೊಂದು ಹೊಸ ದಾಖಲೆಯಾಗಿದೆ. ಲೋಕಸಭೆ ಚುನಾವಣೆಗೆ(Loksabha Elections 2024) ಹೊತ್ತಲ್ಲೇ ಬಜೆಟ್ ಮಂಡನೆ ಮಾಡುತ್ತಿರುವುದರಿಂದ ಮಹತ್ವದ ಘೋಷಣೆಗಳು ಹೊರಬೀಳುವ ನಿರೀಕ್ಷೆಗಳಿವೆ.
ಈವರೆಗೂ ರಾಜ್ಯದ ಬಜೆಟ್ ಗಾತ್ರ 3.27 ಲಕ್ಷ ಕೋಟಿ ರೂಪಾಯಿ ದಾಟಿರಲಿಲ್ಲ. ಆದ್ರೆ. ಈ ಬಾರಿ ಸುಮಾರು 50 ಸಾವಿರ ಕೋಟಿ ರೂಪಾಯಿ ಹೆಚ್ಚಳವಾಗಲಿದೆ. ಇದರೊಂದಿಗೆ ಈ ಬಾರಿ ಬಜೆಟ್​ ಗಾತ್ರ 3.80 ಲಕ್ಷ ಕೋಟಿ ರೂಪಾಯಿ ತಲುಪುವ ನಿರೀಕ್ಷೆಯಿದೆ. ಪಂಚ ಗ್ಯಾರಂಟಿ ಹೊರೆ ಹಾಗೂ ಬರದ ಬರೆ ಸರ್ಕಾರಕ್ಕೆ ಸವಾಲಾಗಿದೆ.. ಪ್ರಸಕ್ತ ವರ್ಷದಲ್ಲಿ ರಾಜಸ್ವ ಸಂಗ್ರಹ ನಿಗದಿತ ಗುರಿ ತಲುಪದೇ ಇರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ. 2024-25 ಸಾಲಿನಲ್ಲಿ ಪಂಚ ಗ್ಯಾರಂಟಿಗಳಿಗಾಗಿ ಸಮಾರು 58,000 ಕೋಟಿ ರೂ. ಅನುದಾನ ಮೀಸಲಿಡುವ ಅನಿವಾರ್ಯತೆ ಇದೆ. ಹೀಗಾಗಿ ಗ್ಯಾರಂಟಿ ವೆಚ್ಚದ ಮಧ್ಯೆ ಅಭಿವೃದ್ಧಿಗೆ ವೇಗ ಕೊಡುವ ಸಮತೋಲಿತ ಬಜೆಟ್ ಮಂಡಿಸಬೇಕಿದೆ. ಆದರೂ ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟು ರಾಜ್ಯದ ಜನತೆಗೆ ಒಂದಷ್ಟು ಬಂಪರ್ ಕೊಡುವೆ ಕೊಡುವ ನಿರೀಕ್ಷೆ ಹೊಂದಲಾಗಿದೆ.

ಸಿಎಂ ಸಿದ್ದರಾಮಯ್ಯ ಬಜೆಟ್​ನಲ್ಲಿ ಮೇಕೆದಾಟು ಯೋಜನೆಗೆ ಹಣ ಘೋಷಣೆ ಮಾಡೋ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಟನಲ್ ನಿರ್ಮಾಣಕ್ಕೆ ಅನುದಾನ, ಸುವರ್ಣ ಮಹೋತ್ಸವ ಹಸರಿನಲ್ಲಿ ಅಭಿವೃದ್ಧಿಯ ಯೋಜನೆ ಘೋಷಣೆ ನಿರೀಕ್ಷೆ ಇದೆ. ಬ್ರ್ಯಾಂಡ್ ಬೆಂಗಳೂರಿಗೆ ಬಜೆಟ್​ನಲ್ಲಿ ಒತ್ತು ಸಾಧ್ಯತೆ, ನಮ್ಮ ಮೆಟ್ರೋ ಮಾರ್ಗ ವಿಸ್ತರಣೆ ಹೆಚ್ಚಿನ ಅನುದಾನ. ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ವಿಶೇಷ ಹಣ ಮೀಸಲು ಹಾಗೂ 100 ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನಗಳ ಜಿರ್ಣೋದ್ಧಾರ ಮಾಡೋದು. ರಾಜ್ಯ ಸರ್ಕಾರಿ ನೌಕಕರಿಗೆ OPS ಭಾಗ್ಯ ಘೋಷಿಸುವಂತ ಸಾಧ್ಯತೆ ಇದೆ. ಮದ್ಯದ ಮೇಲಿನ ಅಬಕಾರಿ ಸುಂಕ ಏರಿಕೆ ಮಾಡೋ ಸಾಧ್ಯತೆ ದಟ್ಟವಾಗಿದೆ. ಜಿಲ್ಲಾ & ತಾಲೂಕು ಕೇಂದ್ರಕ್ಕೆ ಇಂದಿರಾ ಕ್ಯಾಂಟೀನ್ ವಿಸ್ತರಣೆ ಮಾಡ್ಬೋದು ಎನ್ನಲಾಗಿದೆ.

Related Articles

Leave a Reply

Your email address will not be published. Required fields are marked *

error: Content is protected !!