ಜನಪ್ರಿಯ ಜಾಲತಾಣಗಳಾದ ಫೇಸ್ಬುಕ್, ಇನ್ಸ್ಟಾಗ್ರಾಮ್ (Facebook And Instagram) ಸರ್ವರ್ ಡೌನ್ ಆಗಿದ್ದು, ಜಗತಿನಾದ್ಯಂತ ಏಕಾಏಕಿ ಖಾತೆಗಳು ಲಾಗೌಟ್ ಆಗಿವೆ. ಹೌದು..ಇಂದು (ಮಾರ್ಚ್ 05) ರಾತ್ರಿ 9ರ ಸುಮಾರಿಗೆ ಏಕಾಏಕಿ ಫೇಸ್ಬುಕ್ ಹಾಗೂ ಇನ್ಸ್ಟಾಗ್ರಾಮ್ ಏಕಾಏಕಿ ತನ್ನಷ್ಟಕ್ಕೆ ತಾನೇ ಲಾಗೌಟ್ ಆಗಿವೆ. ಇದರಿಂದ ಬಳಕೆದಾರರು ಕಂಗಲಾಗಿದ್ದಾರೆ. ಇನ್ನು ಫೇಸ್ಬುಕ್ ಪಾಸ್ವರ್ಡ್ ಮರೆತವರು ಪುನಃ ಲಾಗಿನ್ ಆಗುವುದಕ್ಕೆ ಪರದಾಡುವಂತಾಗಿದೆ.
: ಏಕಾಏಕಿ ಖಾತೆಗಳು ಲಾಗೌಟ್ ಆಗಿರುವುದು ಏಕೆ? ಎನ್ನುವುದು ಬಳಕೆದಾರರ ಪ್ರಶ್ನೆಯಾಗಿದೆ. ತನ್ನಷ್ಟಕ್ಕೆ ತಾನೇ ಲಗೌಟ್ ಆಗಿದ್ದರಿಂದ ಪಾಸ್ವರ್ಡ್ ಮರೆತವರು ಮತ್ತು ಬೇರೆಯವರ ಕಡೆಯಿಂದ ಫೇಸ್ಬುಕ್ ಖಾತೆ ಸೃಷ್ಟಿಸಿಕೊಂಡವರಿಗೆ ಮತ್ತೆ ಲಾಗಿನ್ ಆಗುವುದು ಹೇಗೆ ಎನ್ನುವ ಚಿಂತೆ ಕಾಡತೊಡಗಿದೆ.