main logo

ಪುತ್ತೂರು ಬಿಜೆಪಿ ಕಾರ್ಯಕರ್ತನ ಮನೆಗೆ ಚೆಂಡೆ ಬ್ಯಾಂಡ್‌ ನೊಂದಿಗೆ ತೆರಳಿ ಬ್ಯಾನರ್‌ ಪ್ರದರ್ಶನ, ಅಕ್ರಮ ಪ್ರವೇಶ: ನಿಂದನೆ ಪ್ರಕರಣ ದಾಖಲು

ಪುತ್ತೂರು ಬಿಜೆಪಿ ಕಾರ್ಯಕರ್ತನ ಮನೆಗೆ ಚೆಂಡೆ ಬ್ಯಾಂಡ್‌ ನೊಂದಿಗೆ ತೆರಳಿ ಬ್ಯಾನರ್‌ ಪ್ರದರ್ಶನ, ಅಕ್ರಮ ಪ್ರವೇಶ: ನಿಂದನೆ ಪ್ರಕರಣ ದಾಖಲು

ಪುತ್ತೂರು: ಸಾಮಾಜಿಕ ಜಾಲತಾಣದ ಬರವಣಿಗೆ ವಿಚಾರದಲ್ಲಿ 15 ಅಧಿಕ ಜನರು ಮನೆಯೊಳಗೆ ಅಕ್ರಮ ಪ್ರವೇಶ ಮಾಡಿ ಅವಾಚ್ಯವಾಗಿ ನಿಂಧಿಸಿ ಜೀವ ಬೆದರಿಕೆ ಹಾಕಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪ್ರಜ್ವಲ್ ರೈ, ಸನತ್ ರೈ ಸಹಿತ 15 ಮಂದಿಯ ಮೇಲೆ ಪ್ರಕರಣದಾಖಲಾಗಿದೆ. ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಜಿಲ್ಲಾ ಸದಸ್ಯ ತಾರಿಗುಣ್ಣ ನಿವಾಸಿ ಜಯಾನಂದ ಕೆ. (41) ದೂರು ನೀಡಿದ್ದಾರೆ.

ಕಾಂಗ್ರೆಸ್‌ ಸರ್ಕಾರದ ಯೋಜನೆಗಳನ್ನು ಬರೆದಿರುವ ಬ್ಯಾನ‌ರ್ ಪ್ರದರ್ಶಿಸಿಕೊಂಡು ಚೆಂಡೆಗಳನ್ನು ಜೋರಾಗಿ ಬಡಿಯುತ್ತಾ ಅಕ್ರಮವಾಗಿ ಪ್ರವೇಶ ಮಾಡಿ ತನಗೆ, ತಾಯಿಗೆ, ಪತ್ನಿ, ಮಕ್ಕಳಿಗೆ ಅವಾಚ್ಯವಾಗಿ ನಿಂಧಿಸಿದ್ದಾರೆ. ಗೋಡೆಗೆ ಕಾಲಿನಿಂದ ಒದ್ದು ಅಸಭ್ಯವಾಗಿ ವರ್ತನೆ ತೋರಿದ್ದಲ್ಲದೆ, ನೀನು ಬಾರಿ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬಗ್ಗೆ ಬರೆಯುತ್ತಿಯಾ ಎಂದು ಗದರಿಸಿ, ನಿನ್ನನ್ನು ನೋಡಿಕೊಳ್ಳುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಅಶೋಕ್‌ ಕುಮಾ‌ರ್ ರೈಯವರು ಶಾಸಕರಾದ 10 ತಿಂಗಳಿನಲ್ಲಿ ಅಭಿವೃದ್ಧಿಯ ಪರ್ವವನ್ನೇ ನಡೆಸಿದ್ದಾರೆ… ಸುಮಾರು 1474.29 ಕೋಟಿ ರೂಪಾಯಿಗಳ ದಾಖಲೆಯ ಅನುದಾನವನ್ನು ಪುತ್ತೂರು ಕ್ಷೇತ್ರಕ್ಕೆ ಬಿಡುಗಡೆ ಮಾಡಿಸಿದ್ದಾರೆ…. ಈ ಅಭಿವೃದ್ಧಿ ಕಾರ್ಯಗಳಿಗೆ ವಿರೋಧ ವ್ಯಕ್ತಪಡಿಸುವ ರೀತಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಪುತ್ತೂರಿನ ತಾರೀತ್ತಡಿ ನಿವಾಸಿ ಜಯಾನಂದ ಬಂಗೇರ ವ್ಯಂಗ್ಯರೀತಿಯಲ್ಲಿ ಬರಹಗಳನ್ನು ಬರೆದು ಅನುದಾನ ಬಿಡುಗಡೆ ಆಗಿಲ್ಲ….ಕಾಮಗಾರಿಗಳ ವಿವರ ಕೊಡಿ ಎಂಬುದಾಗಿ ಪೋಸ್ಟು ಗಳನ್ನು ಹಾಕುತ್ತಿದ್ದ.ಇದನ್ನು ಗಮನಿಸಿದ ಶಾಸಕರ ಅಭಿಮಾನಿ ಬಳಗದ ಸದಸ್ಯರು ಬ್ಯಾಂಡ್ ಮೂಲಕ ಜಯಾನಂದರ ಮನೆಗೆ ತೆರಳಿ ಕಾಮಗಾರಿಗಳ ವಿವರದ ಪ್ಲೆಕ್ಸ್ ಅನ್ನು ಓದಿಸಿ ಇನ್ನು ಮುಂದೆ ಅಪಪ್ರಚಾರ ಮಾಡಬಾರದು ಎಂಬುದಾಗಿ ಎಚ್ಚರಿಕೆ ನೀಡಿದ್ದರು.

Related Articles

Leave a Reply

Your email address will not be published. Required fields are marked *

error: Content is protected !!