main logo

ದ. ಕ, ಉಡುಪಿ ಜಿಲ್ಲೆಯಲ್ಲಿ ಏ. 24ರಿಂದ ಮದ್ಯ ಮಾರಾಟವಿಲ್ಲ

ದ. ಕ, ಉಡುಪಿ ಜಿಲ್ಲೆಯಲ್ಲಿ ಏ. 24ರಿಂದ   ಮದ್ಯ ಮಾರಾಟವಿಲ್ಲ

ಉಡುಪಿ: ಲೋಕಸಭಾ ಚುನಾವಣೆ ಹಿನ್ನೆಲೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಏಪ್ರಿಲ್ 24ರಿಂದ ಮದ್ಯ ನಿಷೇಧ ಜಾರಿಗೆ ಬರಲಿದೆ.

ಮತದಾನ ಹಾಗೂ ಮತ ಎಣಿಕಾ ಕಾರ್ಯ ನಡೆಯುವ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಏಪ್ರಿಲ್ 24ರ ಸಂಜೆ 6 ಗಂಟೆಯಿಂದ ಏಪ್ರಿಲ್ 26ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಎಣಿಕೆಯ ದಿನ ಜೂನ್ 3ರಂದು ಮಧ್ಯರಾತ್ರಿ 12 ಗಂಟೆಯಿಂದ ಜೂನ್ 4ರಂದು ಮಧ್ಯರಾತ್ರಿ 12 ಗಂಟೆಯವರೆಗಿನ ಅವಧಿಯನ್ನು ಮದ್ಯ ಮುಕ್ತ ದಿನಗಳು ಎಂದು ಘೋಷಿಸಲಾಗಿದೆ.

ಆ ದಿನಗಳಲ್ಲಿ ಎಲ್ಲ ರೀತಿಯ ಮದ್ಯದ ಅಂಗಡಿಗಳು, ಮದ್ಯ ಮಾರಾಟ ಡಿಪೋಗಳು, ಮದ್ಯ ತಯಾರಿಕಾ ಡಿಸ್ಟಿಲರಿಗಳು, ಸ್ಟಾರ್ ಹೋಟೆಲ್‌ಗಳು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

Related Articles

Leave a Reply

Your email address will not be published. Required fields are marked *

error: Content is protected !!