main logo

ಉಳ್ಳಾಲ:ರಸ್ತೆ ಬದಿ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿಯಾಗಿ ಇಬ್ಬರಿಗೆ ಗಾಯ

ಉಳ್ಳಾಲ:ರಸ್ತೆ ಬದಿ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿಯಾಗಿ ಇಬ್ಬರಿಗೆ ಗಾಯ

ಉಳ್ಳಾಲ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಬಬ್ಬುಕಟ್ಟೆ ಎಂಬಲ್ಲಿ ಎ.5 ರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ.

ಕಾರು ರಸ್ತೆಯ ಬದಿಯ ಕಬ್ಬಿಣದ ತಡೆಬೇಲಿಯನ್ನು ಭೇದಿಸಿ ನುಗ್ಗಿದ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ. ಢಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬ ಮುರಿದುಬಿದ್ದಿದೆ. ಕಾರು ಭಾಗಶಃ ಜಖಂಗೊಂಡಿದೆ. ಕಾರಿನಲ್ಲಿದ್ದವರು ಕೇರಳ ಮೂಲದವರೆನ್ನಲಾಗಿದ್ದು, ಗಾಯಗೊಂಡಿರುವ ಸ್ಥಳೀಯರು ಉಪಚರಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ. ವಿದ್ಯುತ್ ಕಂಬ ತುಂಡಾಗಿರುವುದರಿಂದ ಸ್ಥಳೀಯವಾಗಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ವಿದ್ಯುತ್ ಕಂಬ ಬದಲಾವಣೆ ಕಾರ್ಯ ಆರಂಭಿಸಲಾಗಿದೆ ಎಂದು ವರದಿ ತಿಳಿಸಿದೆ.

Related Articles

Leave a Reply

Your email address will not be published. Required fields are marked *

error: Content is protected !!