main logo

ಬಿಜೆಪಿ ಸೋಲಿಗೆ ರಾಜಿ ರಾಜಕಾರಣವೇ ಕಾರಣ: ಸಿ.ಟಿ. ರವಿ

ಬಿಜೆಪಿ ಸೋಲಿಗೆ ರಾಜಿ ರಾಜಕಾರಣವೇ ಕಾರಣ: ಸಿ.ಟಿ. ರವಿ

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕೆಲವರ ರಾಜಿ ರಾಜಕಾರಣವೇ ಕಾರಣ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ. ಹೊಂದಾಣಿಕೆ ರಾಜಕಾರಣ ಮಾಡಿಕೊಳ್ಳದಿದ್ದರೆ ಇವತ್ತು ಅಧಿಕಾರ ಕಳೆದುಕೊಳ್ಳುವ ಪರಿಸ್ಥಿತಿ ಬರುತ್ತಿರಲಿಲ್ಲ ಎಂದು ಸ್ವ ಪಕ್ಷದ ನಾಯಕರ ವಿರುದ್ಧವೇ ಸಿಟಿ‌ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅದೇ ರೀತಿ ಕಾಂಗ್ರೆಸ್ ಸರ್ಕಾರ ಪಠ್ಯ ಪುಸ್ತಕ ಮರು ಪರಿಷ್ಕರಣೆ ಮಾಡುವ ಬಗ್ಗೆ ಪ್ರತಿಕ್ರಿಯೆ ನೀಡಿದ್ದು. ಕಾರ್ಲ್ ಮಾರ್ಕ್ಸ್ ಪಠ್ಯ ಓದಬಹುದು, ಆದರೆ ಆರ್​​ಎಸ್​​​ಎಸ್ ನಾಯಕರದ್ದು ಬೇಡವೇ ಎಂದು ಪ್ರಶ್ನಿಸಿದ್ದಾರೆ. ಸಂಘದ ಶಾಖೆಯ ಮೂಲಕವೇ ವಿಚಾರ ಬೆಳೆಯಲಿದೆ. ಪಠ್ಯದಿಂದ ಹೊರಹಾಕಬಹುದಷ್ಟೇ ವಿನಃ ಹೃದಯದಿಂದ ಹೊರಹಾಕಲು ಸಾಧ್ಯವಿಲ್ಲ.

ಚಕ್ರವರ್ತಿ ಸೂಲಿಬೆಲೆಗೆ ಬೆಂಗಲಿಗರು ತುಂಬಾ ಜನರು ಇದ್ದಾರೆ. ದೇಶಭಕ್ತಿಯ ಕಾರಣಕ್ಕೆ ಸೂಲಿಬೆಲೆ ಪ್ರಖ್ಯಾತರಾಗಿದ್ದಾರೆ. ಅವರ ಪ್ರಖ್ಯಾತಿ ಕುಗ್ಗಿಸೋಕೆ ಆಗಲ್ಲ. ಕಾಂಗ್ರೆಸ್​​ನವರು ಮತ್ಸರ, ದ್ವೇಷ ಹೊರಹಾಕುತ್ತಿದ್ದಾರೆ. ಅಧಿಕಾರದ ಮದವನ್ನು ಜನರು ಇಳಿಸುತ್ತಾರೆ ಎಂದು ಸಿಟಿ ರವಿ ಹೇಳಿದ್ದಾರೆ.

Related Articles

Leave a Reply

Your email address will not be published. Required fields are marked *

error: Content is protected !!