main logo

ಸೋತು ಮನೆಯಲ್ಲಿ ಕೂತಿದ್ದೇನೆ, ರಾಜ್ಯಾಧ್ಯಕ್ಷನಾದರೆ ಫೋರ್, ಸಿಕ್ಸ್ ಹೊಡೆಯುತ್ತೇನೆ: ಸೋಮಣ್ಣ

ಸೋತು ಮನೆಯಲ್ಲಿ ಕೂತಿದ್ದೇನೆ, ರಾಜ್ಯಾಧ್ಯಕ್ಷನಾದರೆ ಫೋರ್, ಸಿಕ್ಸ್ ಹೊಡೆಯುತ್ತೇನೆ: ಸೋಮಣ್ಣ

ಬೆಂಗಳೂರು: ವಿಧಾನಸಭೆ ಚುನಾವಣೆ ಸೋಲಿಕ ಬಳಿಕ ಮಾಜಿ ಸಚಿವ ವಿ ಸೋಮಣ್ಣ ಅವರು ಇದೇ ಮೊದಲ ಬಾರಿಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡಿದರು. ಜೂನ್ 25 ರಾಜ್ಯ ಬಿಜೆಪಿಯ ಕಾನೂನು ಪ್ರಕೋಷ್ಠ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಪಕ್ಷದ ಕಚೇರಿಗೆ ಆಗಮಿಸಿದರು.

ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸೋಮಣ್ಣ, ಚುನಾವಣೆ ಸೋಲಿನ ಬಳಿಕ ಮೊದಲ ಬಾರಿ ಕಚೇರಿಗೆ ಬಂದಿದ್ದೇನೆ. ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂಬುದನ್ನು ನಂಬಿದವನು ನಾನು. ಗೋವಿಂದರಾಜನಗರದಲ್ಲಿ 480 ಕೋಟಿ ರೂ.ಗೂ ಹೆಚ್ಚಿನ ಕೆಲಸ ಮಾಡಿರುವೆ. ಆಸ್ಪತ್ರೆ, ಶಾಲೆ, ಕಾಲೇಜು ಸೇರಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ನಾನು ಮನೆಯಲ್ಲಿ ಆರಾಮಾಗಿ ಮಲಗಿದ್ದರೂ ಗೆಲ್ಲುತ್ತಿದೆ. ಆದರೆ ಪಕ್ಷ ನೀಡಿದ ಟಾಸ್ಕ್​​ ಪೂರೈಸಲು ಕ್ಷೇತ್ರ ಬಿಟ್ಟು ಹೋದೆ. ವರುಣಾ ಹಾಗೂ ಚಾಮರಾಜನಗರ ಎರಡೂ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದೆ. ಎರಡರಲ್ಲೂ ಸೋತು ಈಗ ನಿರುದ್ಯೋಗಿ ಆಗಿ​​​ ಮನೆಯಲ್ಲಿ ಕುಳಿತಿದ್ದೇನೆ ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನು ಇದೇ ವೇಳೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿ, ನಾನು ಹೈಕಮಾಂಡ್​​​​​​​ ಬಳಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ನನಗೆ ಇತಿಮಿತಿ ಇದೆ. ಫೋರ್ ಸಿಕ್ಸ್ ಎಲ್ಲ ಇಲ್ಲೆ ಹೊಡೆಯುತ್ತೇನೆ ಅಂತ ಹೇಳಿದ್ದೇನೆ. ಈಗ ಬೋಲ್ಡ್ ಕೂಡ ಆಗಿದ್ದೇನೆ. ಪಕ್ಷ ಕೊಡುವ ಸಂದೇಶದ ಪ್ರಕಾರ ಕೆಲಸ ಮಾಡುತ್ತೇನೆ ಎಂದರು.

Photo credit – Twitter

Related Articles

Leave a Reply

Your email address will not be published. Required fields are marked *

error: Content is protected !!