ಮಂಗಳೂರು: ಜೂ.27ರಂದು ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದರೆ ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿಯು ಗಂಟೆಗೆ 40-45 ಕಿ.ಮೀ ಇಂದ 55 ಕಿ.ಮೀ ವೇಗದಲ್ಲಿ ಸುವ ಸಾಧ್ಯತೆ ಇದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ