ಸುಳ್ಯ: ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಜಿ. ಕೃಷ್ಣಪ್ಪರವರ ವಿರುದ್ಧ ಕಾಂಗ್ರೆಸ್ ಮುಖಂಡರು ದೈವದ ಮೊರೆ ಹೋಗಿದ್ದಾರೆ. ಮತದಾನ ಸಮಯದಲ್ಲಿ ತಾವು ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆನ್ನುವ ಆರೋಪದ ಹಿನ್ನಲೆಯಲ್ಲಿ ಉಚ್ಛಾನೆಗೊಂಡ ಕಾಂಗ್ರೆಸ್ ಮುಖಂಡರು ಕೋಡಿಂಬಾಳದ ಪ್ರಸಿದ್ಧ ಮಜ್ಜಾರು ಕ್ಷೇತ್ರಕ್ಕೆ ಆಗಮಿಸಿ ಹರಕೆ ಹೇಳಿದ್ದಾರೆಂದು ತಿಳಿದು ಬಂದಿದೆ.
ಕೋಡಿಂಬಾಳದ ಪ್ರಸಿದ್ಧ ಮಜ್ಜಾರು ರಾಜನ್ ದೈವದ ಸನ್ನಿಧಿಯಲ್ಲಿ ಹರಕೆ ಹೇಳಿದ್ದು,ತಮ್ಮನ್ನು ಪಕ್ಷದಿಂದ ಪಕ್ಷ ವಿರೋಧಿ ನೆಪ ಹೇಳಿ ಉಚ್ಛಾಟನೆ ಮಾಡಲಾಗಿದೆ.ಆದರೆ ನಾವು ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ. ಜಿ.ಕೃಷ್ಣಪ್ಪ ಅವರ ಕುಮ್ಮಕ್ಕಿನಿಂದ ತಮ್ಮನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ಹೇಳಿದ್ದಾರೆ.
ಕೃಷ್ಣಪ್ಪ ಅವರು ದೈವಸ್ಥಾನಕ್ಕೆ ಬಂದು ಪ್ರಮಾಣ ಮಾಡಲಿ. ಅವರೇ ಪಕ್ಷವನ್ನು ಸೋಲಿಸಿ ನಮ್ಮ ಮೇಲೆ ಆಪಾದನೆ ಮಾಡುತ್ತಿದ್ದಾರೆ. ನಾವು ಇನ್ನೋರ್ವ ಅಭ್ಯರ್ಥಿ ನಂದಕುಮಾರ್ ಅವರನ್ನು ಬೆಂಬಲಿಸದಿರಲು ಅವರೇನು ಕಾಂಗ್ರೆಸ್ ಪಕ್ಷದ ವ್ಯಕ್ತಿಯಲ್ಲವೇ ಎಂದು ಈ ಸಂದರ್ಭ ಬೇಸರವನ್ನು ವ್ಯಕ್ತಪಡಿಸಿದರು.