main logo

ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ

ಯುವ ಬ್ರಿಗೇಡ್ ಕಾರ್ಯಕರ್ತನ ಹತ್ಯೆ

ಮೈಸೂರು: ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದಿದ್ದು, ಈ ವೇಳೆ ಕೊಲೆ ನಡೆದಿದೆ. ವೇಣುಗೋಪಾಲ್ ನಾಯಕ್ ಕೊಲೆಯಾದ ಯುವಕ. ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ವೇಣುಗೋಪಾಲ್ ಯುವಬ್ರಿಗೇಡ್​ನ ಕಾರ್ಯಕರ್ತನಾಗಿದ್ದು, ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿ ನಿವಾಸಿ. ಭಾನುವಾರ ನಡೆದ ಹನುಮ ಜಯಂತಿ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿತ್ತು, ಈ ವೇಳೆ ಎರಡು ಗುಂಪುಗಳ ನಡುವೆ ಮದ್ಯಸ್ತಿಕೆ ವಹಿಸಿ ಸಮಾಧಾನ ಪಡಿಸಲಾಗಿತ್ತು.

ತಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಮೃತ ದೇಹ ರವಾನೆ ಮಾಡಲಾಗಿದ್ದು, ಪೊಲೀಸರು ಘಟನಾ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Related Articles

Leave a Reply

Your email address will not be published. Required fields are marked *

error: Content is protected !!