main logo

ದೇವಳಗಳಲ್ಲಿ ಮೊಬೈಲ್‌ ಬಳಕೆಗೆ ನಿಷೇಧ, ಸರ್ಕಾರದ ಮಹತ್ವದ ಆದೇಶ

ದೇವಳಗಳಲ್ಲಿ ಮೊಬೈಲ್‌ ಬಳಕೆಗೆ ನಿಷೇಧ, ಸರ್ಕಾರದ ಮಹತ್ವದ ಆದೇಶ

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆ ಅಧೀನದ ದೇವಾಲಯಗಳಲ್ಲಿ ಮೊಬೈಲ್‌ ಬಳಕೆಗೆ ನಿಷೇಧ ಹೇರಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಈ ಕುರಿತು ಸುತ್ತೋಲೆ ಬಿಡುಗಡೆ ಮಾಡಿದ್ದು, ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಹಚ್ಚಾಗಿದ್ದು, ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಫೋನ್ ಬಳಕೆಯ ಶಬ್ದಗಳಿಂದ ದೇವಾಲಯದ ಸಿಬ್ಬಂದಿಗಳು ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ಏಕ ಮನಸ್ಸಿನಿಂದ ಧ್ಯಾನ ಪೂಜಾದಿಗಳನ್ನು ನಡೆಸಲು ತೊಂದರೆಯಾಗುತ್ತಿದೆ. ಈ ಕಾರಣದಿಂದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ದೇವರ ದರ್ಶನದ ಸಮಯದಲ್ಲಿ ತಮ್ಮ ಮೊಬೈಲ್ ಫೋನ್‌ಗಳನ್ನು ಸ್ವಿಚ್ ಆಫ್ ಮಾಡಿ, ದೇವರ ದರ್ಶನ ಮಾಡುವಂತೆ ಸೂಚಿಸಲಾಗಿದೆ. ಈ ಬಗ್ಗೆ ದೇವಾಲಯಗಳ ಸೂಚನಾ ಫಲಕಗಳಲ್ಲಿ ಅಗತ್ಯ ಸೂಚನೆಗಳನ್ನು ಪ್ರಕಟಿಸುವಂತೆ ಸೂಚನೆ ನೀಡಲಾಗಿದೆ.

Related Articles

Leave a Reply

Your email address will not be published. Required fields are marked *

error: Content is protected !!