main logo

ಆಹ್ವಾನ ಪತ್ರಿಕೆಯಲ್ಲಿ ಸಚಿವರ ಹೆಸರಿಲ್ಲ ಎಂದು ಅಧಿಕಾರಿಗಳ ಅಮಾನತು: ಶಾಸಕ ಕೋಟ್ಯಾನ್‌ ಹೇಳಿದ್ದೇನು

ಆಹ್ವಾನ ಪತ್ರಿಕೆಯಲ್ಲಿ ಸಚಿವರ ಹೆಸರಿಲ್ಲ ಎಂದು ಅಧಿಕಾರಿಗಳ ಅಮಾನತು: ಶಾಸಕ ಕೋಟ್ಯಾನ್‌ ಹೇಳಿದ್ದೇನು

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಭೇಟಿ ನೀಡಿದ್ದ ಸಿಎಂ ಸಿದ್ದರಾಮಯ್ಯ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಈ ವೇಳೆ ಮೂಡುಬಿದಿರೆ ಶಾಸಕ ವಿಷಯವೊಂದನ್ನು ಪ್ರಸ್ತಾಪಿಸಿ ಜಿಲ್ಲಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ ಘಟನೆ ನಡೆಯಿತು.

ಸಚಿವರ ಹೆಸರಿಲ್ಲ ಎಂದು ಅಮಾನತು ಆರೋಪ: ಗ್ರಾಮ ಪಂಚಾಯಿತಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರು ಹಾಕದೇ ಶಿಷ್ಟಾಚಾರ ಉಲ್ಲಂಘಿಸಿದ ಆರೋಪದ ಮೇಲೆ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಮೂಡುಬಿದಿರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ದಯಾವತಿ ಹಾಗೂ ಇರುವೈಲ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಕಂಠಪ್ಪ ಅವರನ್ನು ಅಮಾನತುಗೊಳಿಸಲಾಗಿದೆ. ಇನ್ನು ಇದಕ್ಕೆ ಮೂಡುಬಿದಿರೆ ಬಿಜೆಪಿ ಶಾಸಕ ಉಮಾನಾಥ ಕೋಟ್ಯಾನ್ ಆಕ್ರೋಶಗೊಂಡಿದ್ದು, ಅಮಾನತು ಆದೇಶವನ್ನು ಹಿಂಪಡೆಯುವಂತೆ ಸಿಎಂ ಸಿದ್ದರಾಮಯ್ಯಗೆ ಒತ್ತಾಯಿಸಿದ್ದಾರೆ.

ನಿನ್ನೆ(ಆಗಸ್ಟ್ 01) ಮಂಗಳೂರಿಗೆ ಬಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಶಾಸಕ ಉಮಾನಾಥ ಕೋಟ್ಯಾನ್ ಅವರು ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವ ಬಗ್ಗೆ ಮುಖ್ಯಮಂತ್ರಿ ಗಮನಕ್ಕೆ ತಂದಿದ್ದು, ಅಧಿಕಾರಿಗಳ ಅಮಾನತು ವಾಪಸ್​ ಪಡೆಯಬೇಕು. ಹಾಗೇ ದಕ್ಷಿಣ ಜಿಲ್ಲಾಧಿಕಾರಿ ಮುಲ್ಲೈ ಮಹಿಲನ್‌ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಇದಕ್ಕೆ ಸಿದ್ದರಾಮಯ್ಯನವರು ಪ್ರತಿಕ್ರಿಯಿಸಿ, ಈ ಬಗ್ಗೆ ತನಿಖೆ ನಡೆಸುವುದಾಗಿ ಶಾಸಕರಿಗೆ ಭರವಸೆ ನೀಡಿದ್ದಾರೆ.

ಗ್ರಾಮ ಪಂಚಾಯಿತಿ ಕಟ್ಟಡದ ಉದ್ಘಾಟನಾ ಕಾರ್ಯಕ್ರಮಕ್ಕೆ ಆಹ್ವಾನಿಸದೆ ಶಿಷ್ಟಾಚಾರ ಉಲ್ಲಂಘಿಸಿದ ಆರೋಪದ ಮೇಲೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ನಿನ್ನೆ(ಆಗಸ್ಟ್ 01) ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಮಾನತು ಮಾಡಿ ಆದೇಶ ಹೊರಡಿಸಿದ್ದರು. ದಕ್ಷಿಣ ಕನ್ನಡ ಜಿಲ್ಲೆ ಮೂಡುಬಿದಿರೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ದಯಾವತಿ ಹಾಗೂ ಇರುವೈಲ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಕಂಠಪ್ಪ ಅವರನ್ನು ಅಮಾನತುಗೊಳಿಸಲಾಗಿತ್ತು.

ಇರುವೈಲ್ ಪಂಚಾಯಿತಿಯ ನೂತನ ಕಟ್ಟಡ ಸೋಮವಾರ ಉದ್ಘಾಟನೆಯಾಗಬೇಕಿತ್ತು. ಆದ್ರೆ, ಆಹ್ವಾನ ಪತ್ರಿಕೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೆಸರನ್ನು ಹಾಕದೇ ಶಿಷ್ಟಾಚಾರ ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ ಈ ಇಬ್ಬರನ್ನೂ ಅಮಾನತು ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್.ಕೆ ಆದೇಶದಲ್ಲಿ ತಿಳಿಸಿದ್ದರು.

Related Articles

Leave a Reply

Your email address will not be published. Required fields are marked *

error: Content is protected !!