main logo

ಪುತ್ರ ಶೋಕದಲ್ಲಿದ್ದ ತಂದೆ ಸಮುದ್ರಕ್ಕೆ ಹಾರಿ ಆತ್ಮಹತ್ಯೆ

ಪುತ್ರ ಶೋಕದಲ್ಲಿದ್ದ ತಂದೆ ಸಮುದ್ರಕ್ಕೆ ಹಾರಿ ಆತ್ಮಹತ್ಯೆ

ಮಂಗಳೂರು: ಕಾಸರಗೋಡು ಜಿಲ್ಲೆಯ ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ ಕಲ್ಲಿನ ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್ (52) ಎಂಬವರ ಮೃತದೇಹ ಸೋಮವಾರ ಬೆಳಿಗ್ಗೆ ಉಳ್ಳಾಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ.

ತಿಂಗಳ ಹಿಂದೆ ಲೋಕೇಶ್ ಅವರ ಪುತ್ರ ರಾಜೇಶ್ ಆತ್ಮಹತ್ಯೆ ಮಾಡಿಕೊಂಡಿದ್ದು, ಪುತ್ರ ಶೋಕದಲ್ಲಿದ್ದ ತಂದೆಯೂ ಇದೀಗ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಮೃತ ಲೋಕೇಶ್ ಅವರ ಪುತ್ರ ರಾಜೇಶ್ (26) ಕಳೆದ ಜು.10 ರಂದು ನಾಪತ್ತೆಯಾಗಿದ್ದು, ಆತನ ಮೃತದೇಹ ಜು.12 ರಂದು ಬೆಳಗ್ಗೆ ಮಂಗಳೂರು ಬೆಂಗರೆ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿತ್ತು. ಮಗನ ಅಗಲಿಕೆ ಬಳಿಕ ತಂದೆ ಲೋಕೇಶ್ ಶೋಕತಪ್ತರಾಗಿ ಮಾನಸಿಕವಾಗಿ ಕುಗ್ಗಿದ್ದರು.

ಆ.13 ರಂದು ಬೆಳಗ್ಗೆ 9.00 ಗಂಟೆಯ ವೇಳೆ ಪರಿಸರದ ಕೆಲವು ಮಂದಿಗೆ ಲೋಕೇಶ್ ಮೊಬೈಲ್ ಮೂಲಕ  ವಾಟ್ಸಪ್ ಆಡಿಯೋ ಸಂದೇಶ ಕಳುಹಿಸಿ “ನಾನು ಈಗ ಸೋಮೇಶ್ವರಕ್ಕೆ ಹೋಗಿ ಸಮುದ್ರಕ್ಕೆ ಹಾರುತ್ತೇನೆ. ನನ್ನ ಹೆಣ ಉಳ್ಳಾಲದಲ್ಲಿ ಸಿಗಬಹುದು” ನಾನು ಮೊಬೈಲ್ ಕೊಂಡು ಹೋಗುವುದಿಲ್ಲ ಮನೆಯಲ್ಲಿ ಇಟ್ಟು ಹೋಗ್ತೇನೆ ಎಂದು ಹೇಳಿ ಮನೆಯಿಂದ ತೆರಳಿದ್ದರು.

ವಾಟ್ಸಪ್ ಸಂದೇಶ ನೋಡಿದ ಕೂಡಲೇ ಪರಿಸರದವರು  ಕರೆ ಮಾಡಿದಾಗ ಮನೆ ಮಂದಿ ಕಾಲ್ ರಿಸೀವ್ ಮಾಡಿದ್ದರು. ಆಗ ಮನೆ ಮಂದಿ, ಲೋಕೇಶ್ ಮೊಬೈಲ್ ಮನೆಯಲ್ಲಿ ಇಟ್ಟು ಹೊರ ಹೋದ ಬಗ್ಗೆ ಮಾಹಿತಿ ನೀಡಿದ್ದರು.

ಕೂಡಲೇ ಈ ವಿಷಯವನ್ನು ಉಳ್ಳಾಲ ಠಾಣೆಗೆ ಮನೆಯವರು ಹಾಗೂ ಪರಿಸರ ನಿವಾಸಿಗಳು ತಿಳಿಸಿದ್ದರು. ಈ ನಡುವೆ ಸೋಮವಾರ 11.00 ಗಂಟೆ ವೇಳೆ ಲೋಕೇಶ್ ಅವರ ಮೃತದೇಹ ಉಳ್ಳಾಲದಲ್ಲಿ ಮೀನುಗಾರರಿಗೆ ಸಿಕ್ಕಿದೆ.

ಯುವಕ ರಾಜೇಶ್ ಆತ್ಮಹತ್ಯೆಯ ತಿಂಗಳ ಅಂತರದಲ್ಲಿ ಆತನ ತಂದೆ ಲೋಕೇಶ್ ಕೂಡ ಆತ್ಮಹತ್ಯೆಗೈದಿರುವುದು ಮನೆಮಂದಿ ಮತ್ತು ನರೆಹೊರೆಯವರನ್ನ ಆತಂಕಕ್ಕೀಡು ಮಾಡಿದೆ.

Related Articles

Leave a Reply

Your email address will not be published. Required fields are marked *

error: Content is protected !!