main logo

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಹಣ ಲೆಕ್ಕ ಮಾಡುವ ಯಂತ್ರ ತಂದ ಅಧಿಕಾರಿಗಳು

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಹಣ ಲೆಕ್ಕ ಮಾಡುವ ಯಂತ್ರ ತಂದ ಅಧಿಕಾರಿಗಳು

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಸರ್ಕಾರಿ ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಹಿನ್ನೆಲೆ ಬೆಂಗಳೂರು, ಕೊಡಗು, ಚಿತ್ರದುರ್ಗ, ಬೀದರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳಿಗಳು ದಾಳಿ ನಡೆಸಿದ್ದಾರೆ.

ಮಹದೇವಪುರ ವಲಯದ ಬಿಬಿಎಂಪಿ ಆರ್‌ಐ ನಟರಾಜ್ ಮನೆ ಮೇಲೆ ದಾಳಿ. ಅಧಿಕಾರಿ ನಟರಾಜು ಮನೆಮೇಲೆ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಶಿವನಹಳ್ಳಿ ಗ್ರಾಮದಲ್ಲಿರುವ ನಟರಾಜು ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆ ಹಣ ಪಡೆಯುವಾಗ ನಟರಾಜ್ ಟ್ರಾಪ್ ಆಗಿದ್ದರು. ಬೆಂಗಳೂರು ಒಂದರಲ್ಲೇ ಹತ್ತಕ್ಕೂ ಹೆಚ್ಚುಕಡೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಹಲವು ಕಡತಗಳನ್ನು ಪರಿಶೀಲಿಸುತ್ತಿದ್ದಾರೆ.

ಹಣಲೆಕ್ಕ ಹಾಕಲು ಮಷಿನ್‌ ತಂದ ಅಧಿಕಾರಿಗಳು: ಆದಾಯಕ್ಕೂ ಮೀರಿ ಆಸ್ತಿ ಆರೋಪ ಹಿನ್ನೆಲೆ ಇಂದು ಕೊಡುಗು ಎಡಿಸಿ ನಂಜುಂಡೇಗೌಡ ಅವರ ಮನೆ ಮೇಲೆ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ನಡೆಸಿದರು. ಕೊಡಗು ಮತ್ತು ಮೈಸೂರು ಜಿಲ್ಲೆ ಲೋಕಾಯುಕ್ತ ಪೊಲೀಸರ ಜಂಟಿ ಕಾರ್ಯಾಚರಣೆ ಡಿವೈಎಸ್‌ಪಿ ಪವನ್ ಕುಮಾರ ನೇತೃತ್ವದಲ್ಲಿ ಮೂವರು ಇನ್ಸ್‌ಪೆಕ್ಟರ್ ಸೇರಿದಂತೆ 10ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯಿಂದ ದಾಳಿ ನಡೆದಿದೆ. ದಾಳಿ ವೇಳೆ ಹಣ ಲೆಕ್ಕ ಹಾಕಲು ಮಷಿನ್ ತಂದ ಅಧಿಕಾರಿಗಳು. ಮನೆಯಲ್ಲಿ ಭಾರೀ ನಗದು ಹಣ ದೊರೆತಿರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಅಪಾರ ಪ್ರಮಾಣದ ಅಕ್ರಮ ಆಸ್ತಿ ಸಂಪಾದನೆ ಆರೋಪದ ಹಿನ್ನಲೆ ಕೊಪ್ಪಳ ನಿರ್ಮಿತಿ ಕೇಂದ್ರದ ಕಚೇರಿ ವ್ಯವಸ್ಥಾಪಕ ಮಂಜುನಾಥ ಬನ್ನಿಕೊಪ್ಪ ಅವರ ನಿರ್ಮಿತಿ ಕೇಂದ್ರ, ಮನೆ, ಹುಲಗಿಯಲ್ಲಿನ ಲಾಡ್ಜ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ಮಂಗಲಾ ಆಸ್ಪತ್ರೆ ಹಿಂಭಾಗದದಲ್ಲಿರುವ ಮನೆ ಮೇಲೂ ದಾಳಿ ಮಾಡಿದ್ದಾರೆ.. ರಾಯಚೂರು ಲೋಕಾಯುಕ್ತ ಎಸ್ಪಿ ಆರ್ ಎಲ್ ಅರಸಿದ್ದಿ ನೇತೃತ್ವದಲ್ಲಿ ಒಟ್ಟು ಮೂರು ಸ್ಥಳಗಳಲ್ಲಿ ಐದು ತಂಡಗಳಿಂದ ಏಕಕಾಲಕ್ಕೆ ದಾಳಿ ನಡೆದಿದೆ.

ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಅರಣ್ಯ ಇಲಾಖೆ ಅಧಿಕಾರಿ ಆರ್.ಎಫ್.ಒ ಸತೀಶ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಲವು ವರ್ಷಗಳಿಂದ ಆರ್‌ಎಫ್ ಓ ಆಗಿರುವ ಸತೀಶ್ ಆದಾಯಕ್ಕೂ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ದಾಳಿ ನಡೆದಿದೆ ಪರಿಶೀಲನೆ ಮುಂದುವರಿದಿದೆ.

Related Articles

Leave a Reply

Your email address will not be published. Required fields are marked *

error: Content is protected !!