main logo

ಪುತ್ತೂರು ಶಾಸಕ ಅಶೋಕ್‌ ರೈ ನೇತೃತ್ವದಲ್ಲಿ ಬೆಂಗಳೂರು ಕಂಬಳ ಪೂರ್ವಭಾವಿ ಸಭೆ

ಪುತ್ತೂರು ಶಾಸಕ ಅಶೋಕ್‌ ರೈ ನೇತೃತ್ವದಲ್ಲಿ ಬೆಂಗಳೂರು ಕಂಬಳ ಪೂರ್ವಭಾವಿ ಸಭೆ

ಬೆಂಗಳೂರು: ಕರಾವಳಿಯ ಮಣ್ಣಿನ ಜನಪದ ಕ್ರೀಡೆ ಕಂಬಳ ಇದೀಗ ದೇಶ ವಿದೇಶಗಳಲ್ಲಿಯೂ ಪ್ರಸಿದ್ಧಿ ಪಡೆದಿದೆ. ಇದೀಗ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಕಂಬಳ ಆಯೋಜನೆಗೆ ಸಿದ್ಧತೆ ನಡೆದಿದೆ. ಬೆಂಗಳೂರಿನಲ್ಲಿ ನಡೆಯುವ ಕಂಬಳಕ್ಕೆ ಪೂರ್ವಭಾವಿ ಸಭೆಯು ನಗರದ ಹೊಟೇಲ್‌ ಸಭಾಂಗಣದಲ್ಲಿ ಪುತ್ತೂರು ಶಾಸಕ ಅಶೋಕ್‌ ರೈ ಅಧ್ಯಕ್ಷತೆಯಲ್ಲಿ ಸೆ. 6ರಂದು ನಡೆಯಿತು.

ಬೆಂಗಳೂರಿನ ಪ್ಯಾಲೇಸ್‌ ಗ್ರೌಂಡಿನಲ್ಲಿ ಮೊತ್ತಮೊದಲ ಬಾರಿಗೆ ನಡೆಯಲಿರುವ ಕಂಬಳವು ಅನೇಕ ರಾಜಕೀಯ, ಸಾಮಾಜಿಕ, ಧಾರ್ಮಿಕ ಹಾಗೂ ತುಳುನಾಡಿನ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಸಭೆಯಲ್ಲಿ ಶಾಸಕರು ತಿಳಿಸಿದರು. ಸಭೆಯಲ್ಲಿ ಬೆಂಗಳೂರಿನಲ್ಲಿರುವ 40ಕ್ಕೂ ಮಿಕ್ಕಿದ ತುಳು ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು. ಕಂಬಳಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದ್ದು, ಲಕ್ಷಾಂತರ ಮಂದಿ ಸೇರುವ ನಿರೀಕ್ಷೆ ಇರುವ ಕಾರಣ ಅಗತ್ಯ ವ್ಯವಸ್ಥೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು

Related Articles

Leave a Reply

Your email address will not be published. Required fields are marked *

error: Content is protected !!