main logo

MLA ಟಿಕೆಟ್ ಆಮಿಷ-ವಂಚನೆ : ಉಗ್ರ ಭಾಷಣಕಾರ್ತಿ ಚೈತ್ರಾ ಕುಂದಾಪುರ ಅರೆಸ್ಟ್!

MLA ಟಿಕೆಟ್ ಆಮಿಷ-ವಂಚನೆ : ಉಗ್ರ ಭಾಷಣಕಾರ್ತಿ ಚೈತ್ರಾ ಕುಂದಾಪುರ ಅರೆಸ್ಟ್!

ಉಡುಪಿ: ಮುಂಬಯಿಯ ಉದ್ಯಮಿಯೊಬ್ಬರಿಗೆ ಕಳೆದ ವಿಧಾನ ಸಭಾ ಚುನಾವಣೆ ಸಂದರ್ಭದಲ್ಲಿ ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಕೋಟ್ಯಂತರ ರೂಪಾಯಿ ವಂಚನೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳಿಂದ ತಲೆಮರೆಸಿಕೊಂಡಿದ್ದ, ಈ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಎಂಬಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.

ತಲೆಮರೆಸಿಕೊಂಡಿದ್ದ ಚೈತ್ರ ಕುಂದಾಪುರ ಕೊನೆಗೂ ಪೋಲಿಸರ ಕೈಗೆ ಸಿಕ್ಕಿಬಿದ್ದಿದ್ದಾರೆ . ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಮಿಂಚಿನ ಕಾರ್ಯಾಚರಣೆ ನಡೆಸಿದ ಬೆಂಗಳೂರು ಸಿಸಿಬಿ ಪೊಲೀಸರು ಸಿನಿಮಿಯ ಶೈಲಿಯಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಉಡುಪಿ ಜಿಲ್ಲೆ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರು ಬೆಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದು ಇವರಿಗೆ ಚೆತ್ರಾ ಮತ್ತಾಕೆಯ ಸಹಚರರ ತಂಡ ಸುಮಾರು ಏಳು ಕೋಟಿ ರುಪಾಯಿ ವಂಚನೆ ಮಾಡಿತ್ತು ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದ ಬಿಲ್ಲವ ನಾಯಕ ಗೋವಿಂದ ಬಾಬು ಪೂಜಾರಿ ಅವರ ಮುಗ್ಧತೆಯನ್ನು ಬಳಸಿಕೊಂಡು ಚೈತಾಳ ತಂಡ ಈ ಮಹಾವಂಚನೆ ನಡೆಸಿತ್ತು.

ಉತ್ತರ ಕರ್ನಾಟಕ ಭಾಗದಲ್ಲಿ ಉಗ್ರ ಭಾಷಣಕಾರ್ತಿಯಾಗಿ ಗುರುತಿಸಿಕೊಂಡಿರುವ ಚೈತ್ರಾ ಕುಂದಾಪುರ, ಗೋಪಾಲ ಪೂಜಾರಿಯವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಕೊಡಿಸುವುದಾಗಿ ನಾಲೈದು ಜನರ ತಂಡದಿಂದ ಬ್ರಹನ್ನಾಟಕ ನಡೆಸಿ, ಕೇಂದ್ರದ ನಾಯಕರು, ಆರೆಸ್ಸೆಸ್ ಪುಮುಖರ ಹೆಸರಿನಲ್ಲಿ ಪಂಗನಾಮ ಹಾಕಿದ್ದರು.

ಇಷ್ಟು ಮಾತ್ರವಲ್ಲದೇ, ಆರ್ ಎಸ್ ಎಸ್ ಪ್ರಮುಖರು ಎಂದು ನಕಲಿ ನಾಯಕರನ್ನು ಸೃಷ್ಟಿ ಮಾಡಿದ್ದ ಚೈತ್ರ ಅಂಡ್ ಟೀಮ್ ಬಳಿಕ ಹಂತ ಹಂತವಾಗಿ ಗೋವಿಂದ ಬಾಬು ಪೂಜಾರಿ ಅವರಿಂದ ಏಳು ಕೋಟಿ ರೂಪಾಯಿ ಸುಲಿಗೆ ಮಾಡಿತ್ತು.ಚೈತ್ರಾ ಅಲ್ಲದೇ ಶ್ರೀಕಾಂತ್ ನಾಯಕ್‌ ಪೆಲತ್ತೂರು ಎಂಬಾತನನ್ನೂ ಕೂಡ ವಶಕ್ಕೆ ಪಡೆದುಕೊಂಡಿರುವ ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಅಜ್ಞಾತ ಸ್ಥಳಕ್ಕೆ ಕರೆದೊಯ್ದಿದ್ದಾರೆ.

ಸುಮಾರು ಮೂರು ಹಂತದಲ್ಲಿ ಏಳು ಕೋಟಿ ರೂಪಾಯಿ ಪೀಕಿಸಿದ್ದ ಖದೀಮರು ಬೈಂದೂರು ಬಿಜೆಪಿಯ ಟಿಕೆಟ್ ಪಕ್ಕಾ ಮಾಡಿಕೊಡುವುದಾಗಿ ನಂಬಿಸಿ ವಂಚನೆ ಎಸಗಿದ್ದರು. ವಂಚನೆ ಪ್ರಕರಣದಲ್ಲಿ ಈವರೆಗೆ ಒಟ್ಟು ನಾಲ್ವರನ್ನು ಪೋಲಿಸರು ವಶಕ್ಕೆ ಪಡೆದಿದ್ದು, ಚೈತ್ರಾ ಕುಂದಾಪುರ, ಗಗನ್ ಕಡೂರು, ಶ್ರೀಕಾಂತ ನಾಯಕ್ ಮತ್ತು ಪ್ರಸಾದ್ ಸಹಿತ ನಾಲ್ವರು ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

Related Articles

Leave a Reply

Your email address will not be published. Required fields are marked *

error: Content is protected !!