ಮಂಗಳೂರು: ನಂತೂರು ಜಂಕ್ಷನ್ ರಸ್ತೆ, ಹೊಂಡ ಗುಂಡಿಗಳಿಂದ ತುಂಬಿದ್ದು ಆ್ಯಕ್ಸಿಡೆಂಟ್ ಸ್ಪಾಟ್ ಎಂದು ಕುಖ್ಯಾತಿ ಪಡೆದಿತ್ತು. ಆದರೆ ಇದೀಗ ಮಂಗಳೂರು ನಗರ ಪೊಲೀಸ್ ಅಧಿಕಾರಿಗಳೇ ಸ್ವತಃ ಗುಂಡಿ ಮುಚ್ಚುವ ಕಾರ್ಯ ಮಾಡಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.
ಈ ಕಾರ್ಯದಲ್ಲಿ ಮಂಗಳೂರು ದಕ್ಷಿಣ ವಿಭಾಗದ ಸಂಚಾರಿ ಠಾಣೆಯ ಸಬ್ ಇನ್ಸ್ಪೆಕ್ಟರ್ ಈಶ್ವರ ಸ್ವಾಮಿ, ASI ವಿಶ್ವನಾಥ ರೈ ಭಾಗಿಯಾಗಿದ್ದರು. ಒಂದೆರಡು ಬಾರಿ ಇಲ್ಲಿ ರಸ್ತೆ ಗುಂಡಿಯನ್ನು ತೇಪೆ ಹಾಕುವ ಕಾರ್ಯ ನಡೆದಿದೆ. ಸ್ವಲ್ಪ ಸಮಯದ ಬಳಿಕ ಗುಂಡಿ ಯಥಾರೀತಿ ಬಾಯಿತೆರೆದು ನಿಂತಿದೆ. ಇಲ್ಲಿ ವಾಹನ ಸವಾರರು ಅದರಲ್ಲೂ ದ್ವಿಚಕ್ರ ಸವಾರರು ಜೀವ ಕೈಯಲ್ಲಿ ಹಿಡಿದೇ ವಾಹನ ಚಲಾಯಿಸಬೇಕಿತ್ತು.
ಈ ಮೂಲಕ ನಾವು ಸಾರ್ವಜನಿಕರು ಮತ್ತು ವಾಹನ ಸವಾರರ ಪಾಲಿನ ನಿಜವಾದ ‘ಆರಕಕ್ಷಕ’ರು ಎಂಬುದನ್ನು ಮಂಗಳೂರು ಪೊಲೀಸರು ಸಾಬೀತುಪಡಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಮಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಬರುವ ನಂತೂರಿನ ತಿರುವಿನ ರಸ್ತೆ ಕಳೆದ ಕೆಲವು ತಿಂಗಳುಗಳಿಂದ ಹೊಂಡ ಗುಂಡಿಗಳು ಸೃಷ್ಟಿಯಾಗಿತ್ತು. ನಗರದ ರಸ್ತೆಗಳೊಂದಿಗೆ 2 ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳು ಕೂಡ ಇಲ್ಲಿ ಹಾದು ಹೋಗುತ್ತದೆ. ಇದರಿಂದ ಸಂಚಾರ ವ್ಯವಸ್ಥೆಗೂ ಭಾರಿ ತೊಂದರೆ ಆಗುತ್ತಿತ್ತು.