main logo

ಪುಟಾಣಿ ಆನೆಮರಿಗೆ ಪೋಷಕರಾದ ಕಾವಾಡಿಗಳು

ಪುಟಾಣಿ ಆನೆಮರಿಗೆ ಪೋಷಕರಾದ ಕಾವಾಡಿಗಳು

ಚಾಮರಾಜನಗರ: ಜಿಲ್ಲೆಯ ಬಂಡೀಪುರ ಅಭಯಾರಣ್ಯದ ರಾಮಪುರ ಆನೆ ಶಿಬಿರದಲ್ಲಿ ‘ದಿ ಎಲೆಫೆಂಟ್ ವಿಸ್ಪರರ್ಸ್’ ಸಿನಿಮಾವನ್ನು ಹೋಲುವ ಘಟನೆ ನಡೆದಿದೆ. ಅನಾಥ ಹೆಣ್ಣು ಮರಿ ಆನೆಗೆ ಪೋಷಣೆ ಮಾಡಿ ದಂಪತಿ ಗಮನ ಸೆಳೆದಿದ್ದಾರೆ.

ಹೆತ್ತ ತಾಯಿಯಿಂದ ಬೇರೆಯಾದ ಮರಿ ಆನೆಗೆ ಕಾವಡಿ ಕುಟುಂಬವೊಂದು ತಂದೆ ತಾಯಿಯಂತೆ ಪೋಷಣೆ ಮಾಡುತ್ತಿದೆ. ಆನೆ ಮರಿ ಹುಟ್ಟಿದ ಏಳೇ ದಿನಕ್ಕೆ ತಾಯಿಯಿಂದ ಬೇರ್ಪಟ್ಟಿದ್ದು ಏಳು ದಿನದ ಮಗುವಿನಿಂದಲೇ ಈ ದಂಪತಿ ಆನೆ ಮರಿಯನ್ನು ಸಾಕುತ್ತಿದ್ದಾರೆ. ಈ ಮರಿ ಆನೆಗೆ ವೇದ ಎಂದು ಹೆಸರಿಡಲಾಗಿದೆ.

ಅನಾಥ ಆನೆ ವೇದ ಅರೆಕ್ಷಣವು ರಾಜು ಹಾಗೂ ಆತನ ಪತ್ನಿಯನ್ನ ಬಿಟ್ಟಿರದು. ಪ್ರತಿ ದಿನ 12 ಲೀಟರ್ ಹಾಲು ಕುಡಿಯುವ ವೇದ, ಕಾವಾಡಿ ದಂಪತಿಯ ಮುದ್ದಿನ ಮಗುವಾಗಿದೆ. ದಂಪತಿಗಳ ನಿಸ್ವಾರ್ಥ ಸೇವೆಗೆ ಬಂಡಿಪುರ ಅರಣ್ಯ ಅಧಿಕಾರಿಗಳ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಮರಿಯಾನೆ ಪೋಷಣೆಗೆ ಬೇಕಾದ ಆರ್ಥಿಕ ಸಹಾಯವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಮಾಡುತ್ತಿದ್ದಾರೆ.

Related Articles

Leave a Reply

Your email address will not be published. Required fields are marked *

error: Content is protected !!