Site icon newsroomkannada.com

video: ಗುರುವಾಯನಕೆರೆಯಲ್ಲಿ ಭೀಕರ ಅಪಘಾತ

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಿಂತಿದ್ದ ಮಹಿಳೆ ಮತ್ತು ಕಾರಿಗೆ ಡಿಕ್ಕಿಯಾಗಿ ಮಹಿಳೆ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ದ.ಕ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ಅಯ್ಯಪ್ಪ ನಗರ ಬಳಿ ನಡೆದಿದೆ. ಅಂಜಲಿ ಶೆಣೈ,ಗಾಯಾಳು ಮಹಿಳೆ ಎಂದು ತಿಳಿದುಬಂದಿದೆ. ಅಫಘಾತದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಹಿಳೆ ಮತ್ತು ಕಾರಿಗೆ ಡಿಕ್ಕಿ ಹೊಡೆದ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ನಂತರ ಬೆಳ್ತಂಗಡಿ ಠಾಣೆಗೆ ಬಂದು ಶರಣಾಗಿದ್ದಾರೆ. ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version