Site icon newsroomkannada.com

ಎದೆ ಎದೆ ಝಲ್ಲೆನಿಸುವ ವಿಡಿಯೋ: : ಬೈಕ್​ಗೆ ಡಿಕ್ಕಿ ಹೊಡೆದು ಒಂದು ಕಿ.ಮೀವರೆಗೆ ಎಳೆದೊಯ್ದ ಕಾರು

 

ಭುವನೇಶ್ವರ: ವೇಗವಾಗಿ ಬಂದ ಕಾರೊಂದು ಬೈಕ್​ಗೆ ಡಿಕ್ಕಿ ಹೊಡೆದು ಒಂದು ಕಿ.ಮೀ ಎಳೆದೊಯ್ದಿರುವ ಘಟನೆ ಭುವನೇಶ್ವರದಲ್ಲಿ ನಡೆದಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಜನವರಿ 31ರ ರಾತ್ರಿ ನಡೆದ ಈ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ಸುಮಾರು ಒಂದು ಕಿಲೋಮೀಟರ್ ದೂರ ಬೈಕ್ ಅನ್ನು ಎಳೆದುಕೊಂಡು ಹೋಗುತ್ತಿದ್ದಾಗ ಕಾರಿನ ಕೆಳಗಡೆ ಬೆಂಕಿ ಕಿಡಿಗಳು ಹೊರಬರುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
ಆ ಘಟನೆ ನೋಡಿದರೆ ಬೈಕ್​ ಸವಾರ ಬದುಕುಳಿದಂತೆ ಕಾಣುತ್ತಿಲ್ಲ, ಬೈಕ್ ಸವಾರನ ಮೇಲೆ ಹಳೆಯ ವೈಷಮ್ಯ ಏನಾದರೂ ಇತ್ತೇ, ಅಥವಾ ಕಾರು ಚಾಲಕ ಮದ್ಯದ ನಶೆಯಲ್ಲಿದ್ದನೇ ಎನ್ನುವ ಪ್ರಶ್ನೆ ಕಾಡುತ್ತಿದೆ. ಕಾರು ಬೈಕ್​ಗೆ ಡಿಕ್ಕಿಯಾದಾಗ ನಿಲ್ಲಿಸುವುದು ಬಿಟ್ಟು ಕಿಲೋಮೀಟರ್​ಗಳಷ್ಟು ದೂರ ಏಕೆ ಎಳೆದುಕೊಂಡು ಹೋಗಿದ್ದಾರೆ ಎನ್ನುವ ಮಾಹಿತಿಯನ್ನು ಪೊಲೀಸರು ಕಲೆ ಹಾಕುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹಿಟ್​ ಆ್ಯಂಡ್​ ರನ್ ಪ್ರಕರಣಗಳು ಹೆಚ್ಚಾಗುತ್ತಿವೆ. ದೆಹಲಿಯಲ್ಲಿ ಕಳೆದ ವರ್ಷ ನ್ಯೂ ಇಯರ್ ಸಂದರ್ಭದಲ್ಲಿ ಸ್ಕೂಟಿಗೆ ಕಾರೊಂದು ಡಿಕ್ಕಿ ಹೊಡೆದು ಯುವತಿಯೊನ್ನು ಕಿಲೋಮೀಟರ್​ಗಳವರೆಗೆ ಎಳೆದೊಯ್ದ ಘಟನೆಯೂ ನಡೆದಿತ್ತು.

ಹಿಟ್ ಆ್ಯಂಡ್ ರನ್ ಪ್ರಕರಣ ಒಂದು ವಾರದ ಹಿಂದಷ್ಟೇ ನಡೆದಿದೆ. ಡಿಕ್ಕಿಯ ರಭಸಕ್ಕೆ ಬ್ಯಾನೆಟ್ ಮೇಲೆ ಬಿದ್ದ ವ್ಯಕ್ತಿಯನ್ನು ಕಾರು ಚಾಲಕ ಹಲವು ಮೀಟರ್​ಗಳಷ್ಟು ದೂರಕ್ಕೆ ಎಳೆದೊಯ್ದ ಘಟನೆ ಬೆಂಗಳೂರು ನಗರದ ಮಲ್ಲೇಶ್ವರಂ ಬಳಿ ನಡೆದಿದೆ. ಘಟನೆಯ ದೃಶ್ಯವಾಳಿ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವೈರಲ್ ಆಗುತ್ತಿದೆ.

ಮಲ್ಲೇಶ್ವರಂನ ಮಾರಮ್ಮ ದೇವಸ್ಥಾನದ ವೃತ್ತದಲ್ಲಿ ಜನವರಿ 15 ರಂದು ನಡೆದ ಘಟನೆ ಇದಾಗಿದ್ದು, ಸಿಸಿಟಿವಿ ಕ್ಯಾಮೆರಾದಲ್ಲಿ ಬೆಚ್ಚಿಬೀಳಿಸುವ ದೃಶ್ಯಾವಳಿಗಳು ಸೆರೆಯಾಗಿವೆ. ಕಾರಿನ ಬಾನೆಟ್‌ ಮೇಲೆ ಬಿದ್ದ ವ್ಯಕ್ತಿಯನ್ನು ಕಾರು ಚಾಲಕ ಹಲವು ಮೀಟರ್​ಗಳಷ್ಟು ದೂರಕ್ಕೆ ಕೊಂಡೊಯ್ಯವುದನ್ನು ವಿಡಿಯೋದಲ್ಲಿ ಕಾಣಬಹುದು. ಅಲ್ಲದೆ, ಇತರ ವಾಹನಗಳು ಮತ್ತು ಮತ್ತಿಬ್ಬರು ವ್ಯಕ್ತಿಗಳು ಕ್ಯಾಬ್ ಅನ್ನು ಬೆನ್ನಟ್ಟುತ್ತಿರುವುದನ್ನು ನೋಡಬಹುದು.

Exit mobile version