Site icon newsroomkannada.com

ಹೊಸಪೇಟೆಯಲ್ಲಿ ಆಟೋ, ಲಾರಿ ನಡುವೆ ಭೀಕರ ಅಪಘಾತ 6 ಮಂದಿ ದುರ್ಮರಣ

ಹೊಸಪೇಟೆ: ಎರಡು ಆಟೋ ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಪ್ರಯಾಣಿಕರು ಸಾವನ್ನಪ್ಪಿದ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ವಡ್ಡರಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ.

ಘಟನೆಯಲ್ಲಿ ಇಬ್ಬರು ಮಕ್ಕಳು ಗಾಯಗೊಂಡಿದ್ದು, ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳ್ಳಾರಿಯಿಂದ ತುಂಗಭದ್ರಾ ಡ್ಯಾಮ್​ ಕಡೆಗೆ ಆಟೋ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಹೊಸಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Exit mobile version