Site icon newsroomkannada.com

ಬಸ್‌ ನಲ್ಲಿ ಬೆಂಕಿ ಅನಾಹುತ ಕನಿಷ್ಠ 25 ಮಂದಿ ಸಾವು

ಮುಂಬೈ: ಮಹಾರಾಷ್ಟ್ರದ ಬುಲ್ಧಾನಾದ ಸಮೃದ್ಧಿ ಮಹಾಮಾರ್ಗ್ ಎಕ್ಸ್‌ಪ್ರೆಸ್‌ವೇಯಲ್ಲಿ 33 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್‌ಗೆ ಬೆಂಕಿಗೆ ಆಹುತಿಯಾಗಿ ಕನಿಷ್ಠ 25 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳನ್ನು ಬುಲ್ಧಾನ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಉಪ ಎಸ್ಪಿ ಬಾಬುರಾವ್ ಮಹಾಮುನಿ ತಿಳಿಸಿದ್ದಾರೆ.

ಶನಿವಾರ ಮುಂಜಾನೆ 2 ಗಂಟೆ ಸುಮಾರಿಗೆ ಖಾಸಗಿ ಟ್ರಾವೆಲ್ಸ್ ಬಸ್ ನಾಗಪುರದಿಂದ ಪುಣೆಗೆ ತೆರಳುತ್ತಿದ್ದಾಗ ಬುಲ್ಧಾನ ಜಿಲ್ಲೆಯ ಸಿಂಧಖೇದರಾಜ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಬಳಿಕ ಬೆಂಕಿ ಅನಾಹುತ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯಂತೆ ಬಸ್ ಟಯರ್ ಒಡೆದು ವಾಹನ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಬಳಿಕ ಡಿವೈಡರ್ ಗೆ ಡಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡಿದೆ ಎಂದು ಬುಲ್ಧಾನ ಎಸ್ ಪಿ ಸುನಿಲ್ ಕಡಸ್ನೆ ಪಿಟಿಐಗೆ ತಿಳಿಸಿದ್ದಾರೆ. ಬಸ್ಸಿನಲ್ಲಿದ್ದ 33 ಪ್ರಯಾಣಿಕರ ಪೈಕಿ 25 ಮಂದಿ ಸುಟ್ಟು ಕರಕಲಾಗಿದ್ದಾರೆ. ಘಟನೆಯಲ್ಲಿ ಬದುಕುಳಿದಿರುವ ಬಸ್‌ನ ಚಾಲಕ, ಕಡಸನೆ ಪ್ರಕಾರ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಟೈರ್ ಒಡೆದ ನಂತರ ಬಸ್ ಪಲ್ಟಿಯಾಗಿದೆ ಎಂದು ಹೇಳಿದರು.

Exit mobile version