ಮುಂಬೈ: ಮಹಾರಾಷ್ಟ್ರದಲ್ಲಿ 37 ಜನರು ಸಜೀವ ದಹನವಾದ ಬಸ್ ಬೆಂಕಿ ಅನಾಹುತ ಮಾಸುವ ಮುನ್ನವೇ ಮತ್ತೊಂದು ಮಹಾದುರಂತ ಸಂಭವಿಸಿದೆ. ಧುಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಡಾಬಾಕ್ಕೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಜನರು ಸಾವನ್ನಪ್ಪಿದ್ದು, ಅನೇಕರಿಗೆ ಗಾಯಗಳಾಗಿವೆ. ಮಹಾರಾಷ್ಟ್ರದ ರಾಜಧಾನಿಯಿಂದ 300 ಕಿಮೀ ದೂರದಲ್ಲಿರುವ ಧುಲೆ ಜಿಲ್ಲೆಯ ಮುಂಬೈ-ಆಗ್ರಾ ಹೆದ್ದಾರಿಯ ಪಲಾಸ್ನೆರ್ ಗ್ರಾಮದ ಬಳಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟ್ರಕ್ನ ಬ್ರೇಕ್ ಫೈಲ್ ಆಗಿರುವ ಕಾರಣ ಡ್ರೈವರ್ನ ನಿಯಂತ್ರಣ ತಪ್ಪಿ ಟ್ರಕ್ ಎರಡು ವಾಹನಗಳಿಗೆ ಡಿಕ್ಕಿ ಹೊಡೆದು ನಂತರ ಹೆದ್ದಾರಿಯ ಬಸ್ ನಿಲ್ದಾಣದ ಬಳಿ ಇದ್ದ ಹೋಟೆಲ್‌ಗೆ ಡಿಕ್ಕಿ ಹೊಡೆದಿದೆ. ಎಂದು ಪೊಲೀಸರು ಹೇಳಿದ್ದಾರೆ.
