main logo

ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ ಇಬ್ಬರ ದುರ್ಮರಣ

ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ ಇಬ್ಬರ ದುರ್ಮರಣ

ಸುಳ್ಯ: ಸುಳ್ಯ ಸಮೀಪದ ಅಡ್ಕಾರಿನ ಬಳಿ ರಸ್ತೆ ಬದಿ ನಿಂತಿದ್ದ ಕಾರ್ಮಿಕರಿಗೆ ಕಾರು ಡಿಕ್ಕಿ ಪ್ರಕರಣದಲ್ಲಿ ಇಬ್ಬರು ದಾರುಣವಾಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಇಂದು (ಗುರುವಾರ) ಬೆಳ್ಳಂ ಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಮಂಗಳೂರಿನ ಆಸ್ಪತ್ರೆಗೆ ದಾಖಲಿಸುವ ದಾರಿ ಮಧ್ಯೆ ಸಾವಿಗೀಡಾಗಿದ್ದಾನೆ ಎಂದು ತಿಳಿದು ಬಂದಿದೆ. ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು ಆತನನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಇನ್ನೋರ್ವ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾನೆ. ಕೆವಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎನ್ನಲಾಗಿದೆ.

ಹಾವೇರಿ ಜಿಲ್ಲೆಯ ರಾಣೆ ಬೆನ್ನೂರು ನಿವಾಸಿಗಳು ಕೂಲಿ ಕೆಲಸವನ್ನು ಅರೆಸಿಕೊಂಡು ಬಂದಿದ್ದರು. ಗುರುವಾರ ಅಡ್ಕಾರಿಗೆ ಬಂದು ರಾತ್ರಿ ಅಲ್ಲಿಯೇ ತಂಗಿದ್ದರು. ಇಂದು ಬೆಳಗ್ಗೆ ನಾಲ್ಕು ಮಂದಿ ಕಾರ್ಮಿಕರು ರಸ್ತೆ ಬದಿ ನಿಂತಿದ್ದರು. ಈ ವೇಳೆ ರಭಸದಿಂದ ಬಂದ ಕಾರೊಂದು ಕಾರ್ಮಿಕರ ಮೇಲೆ ನುಗ್ಗಿ ಬಂದಿದೆ.

ಘಟನೆಯಲ್ಲಿ ನಾಲ್ಕವರು ಕಾರ್ಮಿಕರಿಗೆ ಗಂಭೀರ ಪ್ರಮಾಣದ ಗಾಯಗಳಾಗಿದೆ. ಕಾರು ನಾಲ್ವರಿಗೆ ಗುದ್ದಿದ್ದಲ್ಲದೆ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಲಾರಿಗೂ ಗುದ್ದಿದೆ. ಕಾರು ಚಾಲಕ ಅತ್ಯಂತ ವೇಗದಿಂದ ಚಾಲನೆ ಮಾಡಿಕೊಂಡು ಬಂದಿದುದರಿಂದ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಸದ್ಯ ಗಾಯಾಳುಗಳನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Related Articles

Leave a Reply

Your email address will not be published. Required fields are marked *

error: Content is protected !!