ಬಂಟ್ವಾಳ: ಸರಕಾರಿ ಬಸ್ ಗಳೆರಡು ಓವರ್ ಟೇಕ್ ಮಾಡುವ ಭರದಲ್ಲಿ ದ್ವಿಚಕ್ರದಲ್ಲಿ ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ವಗ್ಗದಲ್ಲಿ ನಡೆದಿದೆ.
ಅಲ್ಲಿಪಾದೆ ಪಲ್ಲವಿ ಅಪಘಾತದಲ್ಲಿ ಗಾಯಗೊಂಡ ವಿದ್ಯಾರ್ಥಿನಿ. ಕೆಳಗಿನ ವಗ್ಗ ತಿರುವಿನಲ್ಲಿ ಧರ್ಮಸ್ಥಳ ಕಡೆಯಿಂದ ಮಂಗಳೂರು ಕಡೆಗೆ ತೆರಳುವ ಎರಡು ಬಸ್ ಗಳು ಅತೀ ವೇಗ ಮತ್ತು ಅಜಾಗರೂಕತೆಯಿಂದ ಓವರ್ ಟೇಕ್ ಸಂದರ್ಭದಲ್ಲಿ ಬಂಟ್ವಾಳ ಕಡೆಯಿಂದ ವಾಮದಪದವು ಕಾಲೇಜಿಗೆ ದ್ವಿಚಕ್ರದಲ್ಲಿ ತೆರಳುತ್ತಿದ್ದ ವಿದ್ಯಾರ್ಥಿನಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬಸ್ ಗಳೆರಡರ ಅಜಾಗರೂಕತೆಯಿಂದ ಸಂಚಾರಕ್ಕೆ ವಿದ್ಯಾರ್ಥಿನಿ ಗಂಭೀರವಾಗಿ ಗಾಯಗೊಂಡಿದ್ದು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ
