Site icon newsroomkannada.com

kadaba Accid attack: ರಾತ್ರಿಯೇ ಕೇರಳದಿಂದ ಬಂದಿದ್ದ

ಕಡಬ: ಕಡಬ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳಿಗೆ ಆಸಿಡ್‌ ದಾಳಿ ಪ್ರಕರಣದ ಆರೋಪಿ ಕೇರಳದ ಮಲಪ್ಪುರಂ ಜಿಲ್ಲೆಯ ನೆಲಂಬೂರು ತಾಲೂಕಿನ ಎಂಬಿಎ ವಿದ್ಯಾರ್ಥಿ ಅಬೀನ್‌ ಎಂಬಾತ ಪೊಲೀಸರ ವಶದಲ್ಲಿದ್ದಾನೆ. ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುತ್ತಿದ್ದು ಕಾಲೇಜಿಗೆ ಬೇರೆ ಬೇರೆ ಕಾಲೇಜುಗಳಿಂದ ವಿದ್ಯಾರ್ಥಿಗಳು ಬಂದಿದ್ದರು. ಇದೇ ವೇಳೆ ವಿದ್ಯಾರ್ಥಿನಿಯೋರ್ವಳ ಮೇಲೆ ಆಸಿಡ್‌ ದಾಳಿ ಮಾಡಿದ್ದಾನೆ. ಆಕೆಯ ಪಕ್ಕದಲ್ಲಿಯೇ ಕುಳಿತಿದ್ದ ಇತರ ಇಬ್ಬರು ವಿದ್ಯಾರ್ಥಿನಿಯರಿಗೂ ದಾಳಿಗೆ ಒಳಗಾಗಿದ್ದಾರೆ.

ರಾತ್ರಿಯೇ ಕೇರಳದಿಂದ ಬಂದಿದ್ದ ಯುವಕ ಯುವತಿಯ ದೂರದ ಸಂಬಂಧಿಯಾಗಿದ್ದು, ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ ಎನ್ನಲಾಗಿದೆ. ಪ್ರೀತಿ ನಿರಾಕರಿಸಿದ್ದ ಹಿನ್ನಲೆಯಲ್ಲಿ ದಾಳಿ ಮಾಡಿದ್ದಾನೆ ಎಂದು ತಿಳಿದುಬಂದಿದೆ.

Exit mobile version