ಬೆಂಗಳೂರು: ಸ್ಯಾಂಡಲ್ವುಡ್ ನಟ ನಾಗಭೂಷಣ್ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದು, ಸತ್ಯಾಸತ್ಯತೆ ಇನ್ನು ಬೆಳಕಿಗೆ ಬರಬೇಕಿದೆ. ಹಾಗಾಗಿ, ಕುಮಾರಸ್ವಾಮಿ ಲೇಔಟ್ ಸಂಚಾರಿ ಪೊಲೀಸರು ಅಪಘಾತ ರಹಸ್ಯ ಭೇದಿಸಲು ಮುಂದಾಗಿದ್ದಾರೆ. ಅಪಘಾತದ ಕುರಿತು ಪರಿಶೀಲನೆ ನಡೆಸುವಂತೆ ಪೊಲೀಸರು ಆರ್‌ಟಿಓ ಅಧಿಕಾರಿಗಳಿಗೆ ಪತ್ರವನ್ನು ಬರೆದಿದ್ದಾರೆ ಎನ್ನಲಾಗಿದೆ. ಆರ್‌ಟಿಓ ಅಧಿಕಾರಿಗಳಿಗೆ ಐಎಂವಿ ಟೆಸ್ಟ್ ಮಾಡಲು ಸೂಚನೆ ನೀಡಿದ್ದಾರೆ. ಐಎಂವಿ ಟೆಸ್ಟ್ ಮೂಲಕ ಆಕ್ಸಿಡೆಂಟ್ ಸೀಕ್ರೆಟ್ ಹೊರಬರಲಿದೆ. ಕಾರಿನ ಮ್ಯಾನ್ಯುಫ್ಯಾಕ್ಚರ್ ಡಿಫಾಲ್ಟ್‌ನಿಂದ ಅಪಘಾತವಾಗಿದ್ಯಾ? ಬ್ರೇಕ್ ಫೇಲೂರ್‌ನಿಂದ ಸಂಭವಿಸಿದ್ಯಾ? ಗಾಡಿ ಎಷ್ಟು ಡ್ಯಾಮೇಜ್ ಆಗಿದೆ ಎಂದು ಈ ಐಎಂವಿ ಟೆಸ್ಟ್‌ನಿಂದ ತಿಳಿದುಬರಬೇಕಿದೆ.
ಇನ್ನು, ನಾಗಭೂಷಣ್ ಕಾರು ಅಪಘಾತಕ್ಕೆ ಡ್ರಂಕ್ ಆಂಡ್ ಡ್ರೈವ್ ಕಾರಣ ಅಲ್ಲ ಎಂದು ತಿಳಿದು ಬಂದಿದೆ. ಅಪಘಾತದ ವೇಳೆ ವಿದ್ಯುತ್ ಕಂಬಕ್ಕೆ ಹಾನಿಯಾದ ಹಿನ್ನೆಲೆಯಲ್ಲಿ ನಾಗಭೂಷಣ್ ಮೇಲೆ ಮತ್ತೊಂದು ದೂರು ದಾಖಲಾಗಬಹುದು . ಪಾದಚಾರಿಗಳಿಗೆ ಡಿಕ್ಕಿ ಹೊಡೆದ ಬಳಿಕ ವಿದ್ಯುತ್ ಕಂಬಕ್ಕೆ ಕಾರು ಗುದ್ದಿಸಿದರು.. ಕಾರು ಡಿಕ್ಕಿಯಿಂದ ವಿದ್ಯುತ್ ಕಂಬಕ್ಕೂ ಹಾನಿ ಆಗಿದೆ. ಕಂಬಕ್ಕೆ ಹಾನಿಯಾದ ಬಗ್ಗೆ ಬೆಸ್ಕಾಂ ಅಧಿಕಾರಿಗಳಿಗೆ ಟ್ರಾಫಿಕ್ ಪೊಲೀಸರು ಮಾಹಿತಿ ನೀಡಿದ್ದಾರೆ. ಹಾನಿ ಬಗ್ಗೆ ದೂರು ನೀಡುವಂತೆ ಬೆಸ್ಕಾಂ ಎಇಗೆ ಪೊಲೀಸರು ಸೂಚನೆ ನೀಡಿದ್ದಾರೆ. ದೂರು ಪಡೆದು ಮತ್ತೊಂದು ಎಫ್‌ಐಆರ್ ದಾಖಲಿಸಲು ಕೆಎಸ್ ಲೇಔಟ್ ಸಂಚಾರ ಪೊಲೀಸರು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಘಟನೆ ಹಿನ್ನಲೆ: ಬೆಂಗಳೂರಿನ ವಸಂತನಗರ ಮುಖ್ಯರಸ್ತೆ ಬಳಿ ಶನಿವಾರ ರಾತ್ರಿ (ಸೆಪ್ಟೆಂಬರ್ 30)ರಂದು ನಟ ನಾಗಭೂಷಣ ಅವರ ಕಾರು ದಂಪತಿಗೆ ಡಿಕ್ಕಿಯಾಗಿ, ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ದಂಪತಿ ಫುಟ್‌ಪಾತ್ ಮೇಲೆ ನಡೆದುಕೊಂಡು ಹೋಗುವಾಗ ನಾಗಭೂಷಣ ಕಾರು ಡಿಕ್ಕಿಯಾಗಿತ್ತು. ಕೃಷ್ಣ (58) ಹಾಗೂ ಅವರ ಪತ್ನಿ ಪ್ರೇಮಾ (48) ಅವರು ರಾತ್ರಿ ವಾಕಿಂಗ್ ಮಾಡುವಾಗ ನಟ ನಾಗಭೂಷಣ ಅವರು ಚಲಾಯಿಸುತ್ತಿದ್ದ ಕಾರು ಡಿಕ್ಕಿಯಾಗಿತ್ತು. ಮೊದಲು ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ, ನಂತರ ಫುಟ್‌ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ಕಾರು ಡಿಕ್ಕಿಯಾಗಿತ್ತು ಅಪಘಾತದ ತೀವ್ರತೆಗೆ ಪ್ರೇಮಾ ಅವರು ಸ್ಥಳದಲ್ಲೇ ಮೃತಪಟ್ಟಿದ್ದರು. ಇನ್ನು ಗಂಭೀರವಾಗಿ ಗಾಯಗೊಂಡಿರುವ ಕೃಷ್ಣರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾಡಲಾಗುತ್ತಿದೆ.